ಸಂದರ್ಶನಕ್ಕೆ 2,574 ಅಭ್ಯರ್ಥಿಗಳು ಆಯ್ಕೆ

7

ಸಂದರ್ಶನಕ್ಕೆ 2,574 ಅಭ್ಯರ್ಥಿಗಳು ಆಯ್ಕೆ

Published:
Updated:

ಬೆಂಗಳೂರು: ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌), ಭಾರತೀಯ ಪೊಲೀಸ್‌ ಸೇವೆ (ಐಪಿಎಸ್‌) ಸೇರಿದಂತೆ ಕೇಂದ್ರ ಸರ್ಕಾರದ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ್ದ ಮುಖ್ಯ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು 2,574 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಆಯ್ಕೆಯಾಗಿದ್ದಾರೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ 2017ರ ಅಕ್ಟೋಬರ್‌ 28 ಮತ್ತು ನವೆಂಬರ್‌ 3ರಂದು ಮುಖ್ಯ ಪರೀಕ್ಷೆ ನಡೆದಿತ್ತು. ಮುಖ್ಯ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಬ್ರುವರಿ 19ರಿಂದ ಸಂದರ್ಶನ ನಡೆಸಲು ಉದ್ದೇಶಿಸಲಾಗಿದೆ ಎಂದು ಆಯೋಗ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಜನವರಿ 18ರ ನಂತರ ಸಂದರ್ಶನ ಪತ್ರವನ್ನು ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry