ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಪಿಸ್ತೂಲ್‌ ತೋರಿಸಿ ಸುಲಿಗೆ; ಆರೋಪಿ ಸೆರೆ

Last Updated 11 ಜನವರಿ 2018, 20:07 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ಪಿಸ್ತೂಲ್‌ ತೋರಿಸಿ ಸುಲಿಗೆ ಮಾಡಿದ್ದ ಆರೋಪಿ ಕೆ.ಆರ್‌.ನಾಗೇಶ್‌ಮೂರ್ತಿ ಎಂಬಾತನನ್ನು ತಲಘಟ್ಟಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಗುಬ್ಬಲಾಳದ ವಜ್ರಮುನಿನಗರದಲ್ಲಿ ವಾಸವಿರುವ ವೃದ್ಧೆಯೊಬ್ಬರ ಮನೆಗೆ ಡಿ. 30ರಂದು ನುಗ್ಗಿದ್ದ ಆರೋಪಿ, ಪಿಸ್ತೂಲ್‌ ತೋರಿಸಿ ಬೆದರಿಸಿದ್ದ. ಬಳಿಕ ಹಲ್ಲೆ ಮಾಡಿ, ಮನೆಯ ಅಲ್ಮೆರಾದಲ್ಲಿದ್ದ ₹15 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಹೋಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನಕಲಿ ಪಿಸ್ತೂಲ್‌ ಸಮೇತ ಆರೋಪಿಯನ್ನು ಸೆರೆಹಿಡಿದಿದ್ದಾರೆ.

‘ಕೊಳ್ಳೇಗಾಲದ ನಾಗೇಶ್‌ಮೂರ್ತಿ ವಿರುದ್ಧ ನಗರದ ಹಲವು ಠಾಣೆಗಳಲ್ಲಿ ಕಳ್ಳತನ, ಸುಲಿಗೆ ಹಾಗೂ ಕೊಲೆಗೆ ಯತ್ನ ಪ್ರಕರಣ ದಾಖಲಾಗಿವೆ. ಹಲವೆಡೆ ಆತ ಕೃತ್ಯ ಎಸಗಿರುವ ಅನುಮಾನವಿದ್ದು, ಆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

ಗಾಂಜಾ ಮಾರುತ್ತಿದ್ದವ ಬಂಧನ: ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ತಿರುವರಂಗ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಚಂದ್ರಪ್ಪ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ 1.5 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT