ಅರ್‌ಎಸ್ಎಸ್ ಕಾರ್ಯಕರ್ತರು ಉಗ್ರಗಾಮಿಗಳು: ಸಿಎಂ ಹೇಳಿಕೆ ಖಂಡಿಸಿ ಬಿಜೆಪಿಯಿಂದ ವ್ಯಾಪಕ ಪ್ರತಿಭಟನೆ

7

ಅರ್‌ಎಸ್ಎಸ್ ಕಾರ್ಯಕರ್ತರು ಉಗ್ರಗಾಮಿಗಳು: ಸಿಎಂ ಹೇಳಿಕೆ ಖಂಡಿಸಿ ಬಿಜೆಪಿಯಿಂದ ವ್ಯಾಪಕ ಪ್ರತಿಭಟನೆ

Published:
Updated:
ಅರ್‌ಎಸ್ಎಸ್ ಕಾರ್ಯಕರ್ತರು ಉಗ್ರಗಾಮಿಗಳು: ಸಿಎಂ ಹೇಳಿಕೆ ಖಂಡಿಸಿ ಬಿಜೆಪಿಯಿಂದ ವ್ಯಾಪಕ ಪ್ರತಿಭಟನೆ

ಬೆಂಗಳೂರು: ‘ಅರ್‌ಎಸ್ಎಸ್ ಕಾರ್ಯಕರ್ತರು ಉಗ್ರಗಾಮಿಗಳು’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ ಶುಕ್ರವಾರ‌ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಮಂಗಳೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾನಿತರ ಮಧ್ಯೆ ವಾಗ್ವಾದಗಳೂ ನಡೆದಿವೆ. ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ

ಮಂಗಳೂರು: ‘ಅರ್‌ಎಸ್ಎಸ್ ಕಾರ್ಯಕರ್ತರು ಉಗ್ರಗಾಮಿಗಳು’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ‌ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಇಲ್ಲಿನ ಕದ್ರಿ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಮುಖಂಡರಾದ ಮೋನಪ್ಪ ಭಂಡಾರಿ, ವೇದವ್ಯಾಸ ಕಾಮತ್ ಸೇರಿದಂತೆ ಹಲವರು ನಾನು ಬಿಜೆಪಿ, ನಾನು ಆರ್ ಎಸ್ ಎಸ್‌ ಎಂಬ ಬರಹವುಳ್ಳ ಭಿತ್ತಿಪತ್ರ ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಮುಖ್ಯಮಂತ್ರಿಯವರು ತಕ್ಷಣವೇ ಹೇಳಿಕೆ‌ ವಾಪಸು ಪಡೆದು, ಕ್ಷಮೆ‌ ಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ಬಿಜೆಪಿ ಮುಖಂಡರಾದ ಯೋಗೀಶ್ ಭಟ್, ಮೋನಪ್ಪ ಭಂಡಾರಿ, ವೇದವ್ಯಾಸ ಕಾಮತ್, ಸತ್ಯಜಿತ್ ಸುರತ್ಕಲ್, ರೂಪಾ ಬಂಗೇರ, ಸಂತೋಷ್ ಕುಮಾರ್ ಸೇರಿದಂತೆ ಬಿಜೆಪಿಯ 86 ಕಾರ್ಯಕರ್ತರನ್ನು ಪೊಲೀಸ್ ಕಾಯ್ದೆಯ ಸೆಕ್ಷನ್ 71 ಅಡಿಯಲ್ಲಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ತಿಳಿಸಿದ್ದಾರೆ.

ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ; ಬಂಧನ

ಚಿತ್ರದುರ್ಗ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ‌ ವಿರುದ್ಧ ನೀಡಿರುವ ಹೇಳಿಕೆ ವಿರೋಧಿಸಿ‌ ಜಿಲ್ಲಾ ಬಿಹೆಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಇಲ್ಲಿನ ಒನಕೆ ಓಬವ್ವ ವೃತ್ತದಲ್ಲಿರುವ ಡಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಕಾರ್ಯಕರ್ತರನ್ನು ಪೊಲೀಸರು ತಡೆದು, ಬಂಧಿಸಿದರು.

ಈ‌ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನಚಕಮಕಿ ನಡೆಯಿತು.

ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದರು.

ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ; ಮಾತಿನ ಚಕಮಕಿ

ಕಲಬುರ್ಗಿ:
ಆರ್‌ಎಸ್‌ಎಸ್ ನವರು ಉಗ್ರಗಾಮಿಗಳು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಬ್ಯಾರಿಕೇಡ್ ಮುರಿದು ಕಾಂಗ್ರೆಸ್ ಕಚೇರಿಯತ್ತ ನುಗ್ಗಿದ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಬಿ.ಜಿ.ಪಾಟೀಲ ಸೇರಿ ಇನ್ನೂರಕ್ಕೂ ಹೆಚ್ಚು ಜನರ ಬಂಧನ.

ಚಿಕ್ಕಮಗಳೂರಿನಲ್ಲಿ ಶಾಸಕರಾದ ಸಿ.ಟಿ.ರವಿ, ಎಂ.ಕೆ.ಪ್ರಾಣೇಶ್, ಇತರ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಂದ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry