‘ಅಸ್ನೋಟಿಕರ್ ಜೆಡಿಎಸ್‌ ಸೇರ್ಪಡೆ ಜನವರಿ 15ಕ್ಕೆ’

7

‘ಅಸ್ನೋಟಿಕರ್ ಜೆಡಿಎಸ್‌ ಸೇರ್ಪಡೆ ಜನವರಿ 15ಕ್ಕೆ’

Published:
Updated:
‘ಅಸ್ನೋಟಿಕರ್ ಜೆಡಿಎಸ್‌ ಸೇರ್ಪಡೆ ಜನವರಿ 15ಕ್ಕೆ’

ಕಾರವಾರ: ‘ಮಾಜಿ ಸಚಿವ ಆನಂದ ಅಸ್ನೋಟಿಕರ್ ಇದೇ 15ರಂದು ಜೆಡಿಎಸ್‌ ಸೇರಲಿದ್ದಾರೆ’ ಎಂದು ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯ ಪುರುಷೋತ್ತಮ ಸಾವಂತ ಹೇಳಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಅವರು ಪಕ್ಷ ಸೇರಲಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರವಾರ– ಅಂಕೋಲಾ ಕ್ಷೇತ್ರದಿಂದ ಅವರು ಕಣಕ್ಕೆ ಇಳಿಯಲಿದ್ದಾರೆ. ಅವರಿಗೆ, ನಮ್ಮ ಸಂಪೂರ್ಣ ಬೆಂಬಲ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಆನಂದ ಅವರು, ‘ಈ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಎಲ್ಲವನ್ನೂ ಹೇಳುತ್ತೇನೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry