ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ

7

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ

Published:
Updated:

ಧಾರವಾಡ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಅಸ್ಪೃಶ್ಯ ಪಂಚಮ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವರದಿ ಜಾರಿ ಮಾಡುವಂತೆ ಬಹಳಷ್ಟು ಹೋರಾಟಗಳನ್ನು ಮಾಡಿದ್ದೇವೆ. ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆಗಳನ್ನು ಮಾಡಿ, ಅಸ್ಪೃಶ್ಯ ಜಾತಿಗಳ ಬೃಹತ್ ಸಮಾವೇಶಗಳ ಮೂಲಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ. ಆದಿ ಜಾಂಬವ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಒಳ ಮೀಸಲಾತಿಯ ವರದಿ ಜಾರಿಗಾಗಿ ಒತ್ತಾಯಿಸಲಾಗಿದೆ. ಆದರೆ, ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪ ಮಾಡಿದರು.

ಸದಾಶಿವ ಆಯೋಗದ ವರದಿಯನ್ನು ಕೂಡಲೇ ರಾಜ್ಯ ಸರ್ಕಾರ ಒಪ್ಪಿಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಪಿತಾಂಬರಪ್ಪ ಬಿಳಾರ, ಬಸಪ್ಪ ಮಾದರ, ಭೀಮಣ್ಣ ತೇರದಾಳ, ಸಂತೋಷ ಸವಣೂರ, ರವಿ ಬಂಕಾಪುರ, ಮೋಹನ ಹಿರೇಮನಿ, ಸುನೀಲ ಗಾಮನಗಟ್ಟಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry