ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದ ಬಲಿಷ್ಠ ನಾಯಕರನ್ನು ಹಿಂದಿಕ್ಕಿದ ನರೇಂದ್ರ ಮೋದಿ ಮೂರನೇ ಪ್ರಭಾವಿ ಜಾಗತಿಕ ನಾಯಕ

Last Updated 12 ಜನವರಿ 2018, 10:44 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹಿಂದಿಕ್ಕಿ ಮೂರನೇ ಪ್ರಭಾವಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದಾರೆ.

ಗ್ಯಾಲಪ್‌ ಇಂಟರ್‌ ನ್ಯಾಷನಲ್‌ ಸಂಸ್ಥೆ ನಡೆಸಿದ ವಿಶ್ವದ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಮೂರನೇ ಸ್ಥಾನ ಪಡೆದಿದ್ದಾರೆ.

ಈ ಸಮೀಕ್ಷೆಗಾಗಿ 50 ರಾಷ್ಟ್ರಗಳಲ್ಲಿ ಜನಾಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಜರ್ಮನಿಯ ಚಾನ್ಸಲರ್‌ ಏಂಜೆಲಾ ಮರ್ಕೆಲ್‌ ಮೊದಲ ಸ್ಥಾನದಲ್ಲಿದ್ದು, ಫ್ರಾನ್ಸ್‌ನ ಪ್ರಧಾನಿ ಎಮ್ಯಾನುವೆಲ್‌ ಮ್ಯಾಕ್ರನ್‌ ಎರಡನೇ ಸ್ಥಾನದಲ್ಲಿದ್ದಾರೆ.

ಬ್ರಿಟನ್‌ ಪ್ರಧಾನಿ ಥೆರೆಸಾ ಮೇ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಂತರದ ಸ್ಥಾನದಲ್ಲಿದ್ದಾರೆ.

ನರೇಂದ್ರ ಮೋದಿ ಅವರು ಜ. 22, 23ರಂದು ಸ್ವಿಜ್ಜರ್‌ಲೆಂಡ್‌ನಲ್ಲಿ ನಡೆಯಲಿರುವ ‘ವಿಶ್ವ ಆರ್ಥಿಕ ವೇದಿಕೆ’ಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT