ಒಂದೇ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಒಲವು

7

ಒಂದೇ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಒಲವು

Published:
Updated:
ಒಂದೇ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಒಲವು

ಬೆಂಗಳೂರು: ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಅಭಿಪ್ರಾಯ ತಿಳಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಂಜೀವ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಬಗ್ಗೆ ಅಭಿಪ್ರಾಯ ತಿಳಿಸಲಾಗಿದೆ ಎಂದರು. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನವರಿ 22ರವರೆಗೂ ಕಾಲಾವಕಾಶ ನೀಡಲಾಗಿದೆ.

ಈಗಾಗಲೇ ಮತದಾರರ ಅರ್ಜಿಯನ್ನು ಪರಿಷ್ಕರಣೆ ಮಾಡಲಾಗುತ್ತಿದ್ದು ಒಟ್ಟು 12 ಲಕ್ಷ ಹೊಸ ಅರ್ಜಿಗಳು ಬಂದಿವೆ. ಈ ಪೈಕಿ 7.5 ಲಕ್ಷ ಹೊಸ ಮತದಾರರು ಇದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry