ಅತ್ಯಾಚಾರದ ದೂರು ನೀಡಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನ

7

ಅತ್ಯಾಚಾರದ ದೂರು ನೀಡಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನ

Published:
Updated:

ಶೃಂಗೇರಿ: ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ದೂರು ನೀಡಿದ್ದ ತಾಲ್ಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಲಿತ ಮಹಿಳೆಯೊಬ್ಬರು ಗುರುವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಹೆಚ್ಚೆ ನರೇಂದ್ರ ಹೆಗ್ಡೆ ವಿರುದ್ಧ ಮಹಿಳೆಯು ಮಂಗಳವಾರ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

‘ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ನಡೆಸಿದ ನಂತರ ಪಾನಮತ್ತರಾಗಿದ್ದ ನರೇಂದ್ರ ಹೆಗ್ಡೆ, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ.ಮನೆಯಲ್ಲಿ ಒಬ್ಬಳೇ ಇದ್ದಾಗ ಅತ್ಯಾಚಾರ ನಡೆದಿದೆ’ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು. ಮಹಿಳೆಯು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry