19ರಂದು ವಿಜಯಶಂಕರ್‌ ಕಾಂಗ್ರೆಸ್‌ಗೆ ಸೇರ್ಪಡೆ

7

19ರಂದು ವಿಜಯಶಂಕರ್‌ ಕಾಂಗ್ರೆಸ್‌ಗೆ ಸೇರ್ಪಡೆ

Published:
Updated:
19ರಂದು ವಿಜಯಶಂಕರ್‌ ಕಾಂಗ್ರೆಸ್‌ಗೆ ಸೇರ್ಪಡೆ

ಮೈಸೂರು: ಬಿಜೆಪಿ ತೊರೆದಿರುವ ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌ ಅವರು ಜ.19ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ.

‘ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರುತ್ತೇನೆ. ಯಾವುದೇ ಷರತ್ತು ವಿಧಿಸಿಲ್ಲ. ಅಂದು ಪತ್ರಿಕಾಗೋಷ್ಠಿ ನಡೆಸಿ ಪಕ್ಷವೊಂದರ ಬಂಡವಾಳ ಬಯಲು ಮಾಡುತ್ತೇನೆ. ಕೆಲವರ ಮುಖವಾಡ ಕಳಚುತ್ತೇನೆ’ ಎಂದು ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇದಕ್ಕೂ ಮುನ್ನ ಅವರು ಸುಮಾರು ಅರ್ಧ ತಾಸು ಸಿದ್ದರಾಮಯ್ಯ ಜೊತೆ ಸಮಾಲೋಚನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry