ಗಂಭೀರ ವಿಚಾರ: ರಾಹುಲ್‌

7

ಗಂಭೀರ ವಿಚಾರ: ರಾಹುಲ್‌

Published:
Updated:

ನವದೆಹಲಿ: ‘ಸುಪ್ರೀಂ ಕೋರ್ಟ್‌ ಅನ್ನು ರಕ್ಷಿಸದಿದ್ದರೆ ದೇಶದಲ್ಲಿ ಪ್ರಜಾತಂತ್ರ ಉಳಿಯುವುದಿಲ್ಲ ಎಂದು ನ್ಯಾಯಮೂರ್ತಿ ಚಲಮೇಶ್ವರ್ ಹೇಳಿರುವುದು ಅತ್ಯಂತ ಗಂಭೀರ ವಿಚಾರ. ಈ ಮಾತನ್ನು ತೀರಾ ಸೂಕ್ಷ್ಮವಾಗಿ ಗಮನಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ನ್ಯಾಯಾಧೀಶ ಬಿ.ಎಚ್. ಲೋಯ ಸಾವಿನ ಕುರಿತು ಸುಪ್ರೀಂ ಕೋರ್ಟ್‌ ಅತ್ಯುನ್ನತ ಮಟ್ಟದ ತನಿಖೆ ನಡೆಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

‘ನ್ಯಾಯಮೂರ್ತಿಗಳು ಪ್ರಸ್ತಾಪಿಸಿರುವ ವಿಚಾರಗಳು ಚಿಂತೆ ಮೂಡಿಸುವಂಥವು. ಪವಿತ್ರ ಎಂದು ನಾವು ನಂಬಿರುವ ಮೌಲ್ಯಗಳ ಮೇಲೆ ದೂರಗಾಮಿ ಪರಿಣಾಮ ಬೀರಬಲ್ಲಂಥವು’ ಎಂದು ಕಾಂಗ್ರೆಸ್‌ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry