18ರಂದು ಪಾಲಿಕೆ ಗುತ್ತಿಗೆದಾರರ ಪ್ರತಿಭಟನೆ

7

18ರಂದು ಪಾಲಿಕೆ ಗುತ್ತಿಗೆದಾರರ ಪ್ರತಿಭಟನೆ

Published:
Updated:

ಬೆಂಗಳೂರು: ಬಿಬಿಎಂಪಿಯ ಕಾಮಗಾರಿಗಳ ₹1350 ಕೋಟಿ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ಇದೇ 18ರಂದು ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ. ಟಿ. ಮಂಜುನಾಥ್‌ ತಿಳಿಸಿದರು.

ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡು ತಿಂಗಳಿನಿಂದ ಹಣ ಪಾವತಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮೇಯರ್‌ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.

‘ಸುಮಾರು 2,500 ನೋಂದಾಯಿತ ಗುತ್ತಿಗೆದಾರರಿದ್ದಾರೆ. ಎಲ್ಲರೂ ಬಿಬಿಎಂಪಿ ಕಾಮಗಾರಿಗಳನ್ನು ಅವಲಂಬಿಸಿದ್ದಾರೆ. ಪಾಲಿಕೆಯ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ ಸಂಸ್ಥೆಗೆ ವಹಿಸಲಾಗುತ್ತಿದೆ. ಜತೆಗೆ ಪ್ಯಾಕೇಜ್‌ ಟೆಂಡರ್‌ ನೀಡಲಾಗುತ್ತಿದೆ. ಈ ಮೂಲಕ ಭ್ರಷ್ಟಾಚಾರ ನಡೆಸಲಾಗುತ್ತಿದೆ. ಇದರಿಂದಾಗಿ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry