‘ಆಹಾರ ಪದಾರ್ಥಗಳ ಗುಣಮಟ್ಟ ಕಾಪಾಡಲು ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ’

7
ಮಾತೃಪೂರ್ಣ: ಸಚಿವೆ ಉಮಾಶ್ರೀಯಿಂದ ಪ್ರಗತಿ ಪರಿಶೀಲನೆ

‘ಆಹಾರ ಪದಾರ್ಥಗಳ ಗುಣಮಟ್ಟ ಕಾಪಾಡಲು ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ’

Published:
Updated:

ಬೆಂಗಳೂರು: ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಾಪಾಡುವ ಉದ್ದೇಶದಿಂದ ಮಹಿಳಾ ಪೌಷ್ಟಿಕ ಆಹಾರ ಉತ್ಪಾದನಾ ಘಟಕಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಉಮಾಶ್ರೀ ತಿಳಿಸಿದರು.

ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕ್ಯಾಮೆರಾ ಅಳವಡಿಸುವ ಜವಾಬ್ದಾರಿಯನ್ನು ಆಯಾ ವ್ಯಾಪ್ತಿಯ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ವಹಿಸಲಾಗುವುದು ಎಂದರು.

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಮಾತೃಪೂರ್ಣ ಕೂಡಾ ಒಂದು. ಗರ್ಭಿಣಿ ಮತ್ತು ಬಾಣಂತಿಯರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ದೊರಕುವಂತಾಗಲು ಅಧಿಕಾರಿಗಳು ಎಚ್ಚರ ವಹಿಸಬೇಕು. ಕಳಪೆ ಆಹಾರ ಪೂರೈಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇಲಾಖೆಯ ಎಲ್ಲ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಅನುಷ್ಠಾನದಲ್ಲಿ ಲೋಪ ಕಂಡುಬಂದರೆ ಉಪ ನಿರ್ದೇಶಕರನ್ನು ಹೊಣೆ ಮಾಡಲಾಗುವುದು ಎಂದು ಉಮಾಶ್ರೀ ಎಚ್ಚರಿಕೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry