ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ ಫೆ.9ರಂದು

7

ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ ಫೆ.9ರಂದು

Published:
Updated:

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 52ನೇ ಘಟಿಕೋತ್ಸವ ಫೆಬ್ರುವರಿ 9ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿರುವ ಡಾ.ಬಾಬು ರಾಜೇಂದ್ರ ಪ್ರಸಾದ್‌ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಲಿದೆ.

ಕೇಂದ್ರ ಜೈವಿಕ ತಂತ್ರಜ್ಞಾನ ಇಲಾಖೆಯ ನಿವೃತ್ತ ಕಾರ್ಯದರ್ಶಿ ಡಾ.ಮಂಜು ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ವಜುಭಾಯ್‌ ವಾಲಾ ಪದವಿ ಪ್ರದಾನ ಮಾಡಲಿದ್ದಾರೆ. ವಿ.ವಿ ಸಹ ಕುಲಾಧಿಪತಿ ಕೃಷಿ ಸಚಿವ ಕೃಷ್ಣ ಬೈರೇಗೌಡ ಭಾಗವಹಿಸಲಿದ್ದಾರೆ ಎಂದು ವಿ.ವಿ ವಿಸ್ತರಣಾ ನಿರ್ದೇಶಕ ಎಂ.ಎಸ್‌.ನಟರಾಜು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry