ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿಭಟನೆ

7

ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿಭಟನೆ

Published:
Updated:

ಬೆಂಗಳೂರು: ವಿಜಯಪುರದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಹಾಗೂ ಭೀಮಾ ಕೋರೆಗಾಂವ್‌ ವಿಜಯೋತ್ಸವ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ಕಾರ್ಯಕರ್ತರು ಆನಂದ್‌ರಾವ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಒಕ್ಕೂಟದ ರಾಜ್ಯ ಸಂಚಾಲಕಿ ಕೆ.ವಿ.ಭಾಗ್ಯಮ್ಮ ನಾರಾಯಣಸ್ವಾಮಿ, ‘ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದ ಆರೋಪಿಗಳು ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಅವರನ್ನು ಗಲ್ಲಿಗೇರಿಸಬೇಕು’ ಎಂದು ಒತ್ತಾಯಿಸಿದರು.

ಮಹಿಳೆ ಮತ್ತು ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry