ಇಂದಿರಾ ಕ್ಯಾಂಟೀನ್‌ಗೆ ಚಾಲನೆ

7

ಇಂದಿರಾ ಕ್ಯಾಂಟೀನ್‌ಗೆ ಚಾಲನೆ

Published:
Updated:

ಬೆಂಗಳೂರು: ಯಲಹಂಕದ ಚೌಡೇಶ್ವರಿ ವಾರ್ಡ್‌ನಲ್ಲಿ ಪ್ರಾರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗೆ ಸಂಸದ ಎಂ. ವೀರಪ್ಪ ಮೊಯಿಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಚುನಾವಣೆ ಸಂದರ್ಭದಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕೋಮುಗಲಭೆ ಸೃಷ್ಠಿಸುವ ಮೂಲಕ ಜನರ ನೆಮ್ಮದಿ ಕದಡುತ್ತಿದೆ. ಇದರಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ’ ಎಂದರು.

‘ಹಿಂದಿನ ಚುನಾವಣೆ ವೇಳೆಯೂ ಇದೇ ರೀತಿ ಕೋಮುಗಲಭೆ ಸೃಷ್ಟಿಸಿದ್ದರು. ಅದು ಬಿಜೆಪಿಗೆ ಮುಳುವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 7 ಕ್ಷೇತ್ರಗಳಲ್ಲಿ ಜಯಗಳಿಸಿತ್ತು’ ಎಂದು ತಿಳಿಸಿದರು.

ನಗರದ 165 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ ಕಾರ್ಯನಿರ್ವಹಿಸುತ್ತಿದೆ. ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿಯೂ ಯೋಜನೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry