ಕಾರ್ತಿ ಚಿದಂಬರಂ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

7

ಕಾರ್ತಿ ಚಿದಂಬರಂ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

Published:
Updated:
ಕಾರ್ತಿ ಚಿದಂಬರಂ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಚೆನ್ನೈ: ಏರ್‌ಸೆಲ್–ಮ್ಯಾಕ್ಸಿಸ್‌ ಒಪ್ಪಂದಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ಚಟುವಟಿಕೆ ಆರೋಪದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ದೆಹಲಿ, ಚೆನ್ನೈನ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆನ್ನೈನ ನಾಲ್ಕು ಕಡೆ ಮತ್ತು ದೆಹಲಿಯ ಒಂದು ಕಡೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕಾರ್ತಿ ಚಿದಂಬರಂ ವಿರುದ್ಧ ಕಳೆದ ವರ್ಷ ದಾಖಲಾಗಿರುವ ಅಕ್ರಮ ಹಣಕಾಸು ಚಟುವಟಿಕೆ ಆರೋಪಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ. ಚೆನ್ನೈ ಮತ್ತು ಕೋಲ್ಕತ್ತದಲ್ಲಿರುವ ಕಾರ್ತಿ ಆಪ್ತರ ಮನೆ, ಕಚೇರಿಗಳ ಮೇಲೆ ಡಿಸೆಂಬರ್ 1ರಂದು ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಕಾರ್ತಿ ಅವರಿಗೆ ಸೇರಿದ ₹ 1.16 ಕೋಟಿ ಮೌಲ್ಯದ ಸ್ವತ್ತುಗಳನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry