ಮಹಾರಾಷ್ಟ್ರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಕುಸ್ತಿಪಟುಗಳು ಸೇರಿ ಆರು ಮಂದಿ ಸಾವು

7

ಮಹಾರಾಷ್ಟ್ರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಕುಸ್ತಿಪಟುಗಳು ಸೇರಿ ಆರು ಮಂದಿ ಸಾವು

Published:
Updated:
ಮಹಾರಾಷ್ಟ್ರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಕುಸ್ತಿಪಟುಗಳು ಸೇರಿ ಆರು ಮಂದಿ ಸಾವು

ಮಹಾರಾಷ್ಟ್ರ: ಸಾಂಗ್ಲಿ ಜಿಲ್ಲೆಯ ಕಡೆಗಾಂವ್‌ ತಾಲ್ಲೂಕಿನ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಟ್ರ್ಯಾಕ್ಟರ್‌ ಮತ್ತು ಎಸ್‌ಯುವಿ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಕುಸ್ತಿಪಟುಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.

ಕುಸ್ತಿಪಟುಗಳು ಶುಕ್ರವಾರ ಸ್ಥಳೀಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯನ್ನು ಮುಗಿಸಿಕೊಂಡು ಮನೆಗಳಿಗೆ ಮರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಇತರೆ ಏಳು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಘಟನೆ ಬಳಿಕ ಟ್ರ್ಯಾಕ್ಟರ್‌ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry