ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಸಂಘಟನೆಗಳಿಂದ ಜಿಆರ್‌ಬಿಸಿ ಕಚೇರಿಗೆ ಮುತ್ತಿಗೆ

Last Updated 13 ಜನವರಿ 2018, 6:40 IST
ಅಕ್ಷರ ಗಾತ್ರ

ಗೋಕಾಕ: ಘಟಪ್ರಭಾ ಬಲದಂಡೆ ಕಾಲುವೆಯ ಆಯಕಟ್ಟಿನ ಸ್ಥಳಗಳಲ್ಲಿಯ ಕೂಡು ರಸ್ತೆಗಳ ರಿಪೇರಿ ಹಾಗೂ ಕಾಲುವೆ ಕೊನೆಯ ಭಾಗದ ಜಮೀನುಗಳಿಗೆ ನೀರು ತಲುಪುವಂತೆ ನೋಡಿಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಇಲ್ಲಿಯ ಜಿಆರ್‌ಬಿಸಿ ಕಾರ್ಯನಿರ್ವಾಹಕ ಅಭಿಯಂತರರ ವಿಭಾಗೀಯ ಕಚೇರಿಗೆ ಇತ್ತೀಚೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಭೀಮಶಿ ಗದಾಡಿ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಗಣಪತಿ ಇಳಿಗೇರ ಮಾತನಾಡಿ, ಕೆನಾಲ್ ಪಕ್ಕದ ಆಯಕಟ್ಟಿನ ಕೂಡು ರಸ್ತೆಗಳು ಸಂಪೂರ್ಣ ಕೆಟ್ಟು ಹೋಗಿದ್ದು ಇದರಿಂದ ರೈತರಿಗೆ ಸಂಚರಿಸಲು ತೊಂದರೆಯಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಕಾರ್ಯಾಧ್ಯಕ್ಷ ಮಂಜುನಾಥ ಪೂಜೇರಿ, ಮುಖಂಡರಾದ ಗೋಪಾಲ ಕುಕನೂರ, ಸತ್ತೆಪ್ಪ ಮಲ್ಲಾಪೂರೆ, ಮುತ್ತೆಪ್ಪ ಕುರಬರ, ಪ್ರಕಾಶ ಹಾಲನ್ನವರ, ಯಲ್ಲಪ್ಪ ತಿಗಡಿ, ಸಿದ್ರಾಮ ಪೂಜೇರಿ, ಬಸವರಾಜ ನಾಯಕ, ಪ್ರದೀಪ ಪೂಜೇರಿ, ರಾಮಣ್ಣ ಡಬಾಜ, ಕುಮರ ತಿಗಡಿ, ಮಲ್ಲಿಕಾರ್ಜುನ ಬಾಗನ್ನವರ ಸೇರಿದಂತೆ ಪ್ರತಿಭಟನೆಯಲ್ಲಿ ಅನೇಕರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರೈತರ ಅಹವಾಲುಗಳನ್ನು ಆಲಿಸಿದ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಸ್.ಗಿಡ್ಡೋಳಿ ಅವರು ಸೂಕ್ತ ಕ್ರಮಕ್ಕಾಗಿ ಮೇಲಧಿಕಾರಿಗಳ ಗಮನ ಸೆಳೆದು ಆದಷ್ಟು ಬೇಗನೆ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT