ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

7

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Published:
Updated:

ಬೀದರ್: ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಬಜರಂಗ ದಳದವರು ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಿವನಗರದ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಉದಗಿರ ರಸ್ತೆ ಮಾರ್ಗವಾಗಿ ಕಾಂಗ್ರೆಸ್‌ ಕಚೇರಿಯತ್ತ ಹೊರಟಿದ್ದಾಗ ಮಾರ್ಗ ಮಧ್ಯೆ ಪೊಲೀಸರು ತಡೆದರು. ಪೊಲೀಸರು ಅಡ್ಡಲಾಗಿ ಇಟ್ಟಿದ್ದ ಬ್ಯಾರಿಕೇಡ್‌ ಬದಿಗೆ ಸರಿಸಿ ಕಾಂಗ್ರೆಸ್ ಕಚೇರಿಯತ್ತ ಹೊರಟಾಗ 100 ಜನರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ, ಬಾಬುರಾವ್ ಮದಕಟ್ಟಿ, ಈಶ್ವರಸಿಂಗ್‌ ಠಾಕೂರ್‌, ಜಯಕುಮಾರ ಕಾಂಗೆ, ಬಾಬುರಾವ್ ಕಾರಭಾರಿ, ರೇವಣಸಿದ್ದಪ್ಪ ಜಲಾದೆ, ಶಕುಂತಲಾ ಬೆಲ್ದಾಳೆ, ಚಂದ್ರಕಲಾ ವಿಶ್ವಕರ್ಮ, ಮಹೇಶ ಪಾಲಂ, ಜಗದೀಶ ಬಿರಾದಾರ, ಜಗದೀಶಚಂದ್ರ ಸ್ವಾಮಿ, ಬಸವರಾಜ ಜೋಜನಾ ಹಾಗೂ ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry