ರಾಜ್ಯದಲ್ಲೇ ಹೆಚ್ಚು ಲ್ಯಾಪ್‌ಟಾಪ್ ಪಡೆದ ಸರ್ಕಾರಿ ಕಾಲೇಜು

7

ರಾಜ್ಯದಲ್ಲೇ ಹೆಚ್ಚು ಲ್ಯಾಪ್‌ಟಾಪ್ ಪಡೆದ ಸರ್ಕಾರಿ ಕಾಲೇಜು

Published:
Updated:

ದಾವಣಗೆರೆ: ರಾಜ್ಯದಲ್ಲೇ ಅತಿ ಹೆಚ್ಚು ಲ್ಯಾಪ್‌ಟಾಪ್‌ಗಳನ್ನು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಸಂತಸದ ವಿಷಯ ಎಂದು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಲ್ಲಿ ಭೌತಿಕ ಅರಿವು ಮೂಡಿಸುವ ಹಿನ್ನಲೆಯಲ್ಲಿ ಸರ್ಕಾರವು ಲ್ಯಾಪ್‌ಟಾಪ್ ವಿತರಿಸುವ ಯೋಜನೆಯನ್ನು ಕೈಗೊಂಡಿದೆ. ಈ ವರ್ಷ ಲ್ಯಾಪ್‌ಟಾಪ್ ವಿತರಣೆಯಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದಿಂದ ಒಟ್ಟು 336 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಶೋಭಾ ಶಿವಾನಂದಪ್ಪ ಪಲ್ಲಾಗಟ್ಟೆ ಮಾತನಾಡಿದರು. ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕರಾಕ ಎಸ್.ಆರ್.ಭಜಂತ್ರಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭೀಮಣ್ಣ ಬಿ. ಸುಣಗಾರ್, ಪ್ರಾಧ್ಯಾಪಕ ಡಾ.ಮಂಜಣ್ಣ ಅವರೂ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry