ಭಾರತದ ಎದುರು ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ; ಬ್ಯಾಟಿಂಗ್‌ ಆಯ್ಕೆ

7

ಭಾರತದ ಎದುರು ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ; ಬ್ಯಾಟಿಂಗ್‌ ಆಯ್ಕೆ

Published:
Updated:
ಭಾರತದ ಎದುರು ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ; ಬ್ಯಾಟಿಂಗ್‌ ಆಯ್ಕೆ

ಸೆಂಚೂರಿಯನ್‌, ದಕ್ಷಿಣ ಆಫ್ರಿಕಾ: ಇಲ್ಲಿನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ– ದಕ್ಷಿಣ ಆಫ್ರಿಕಾ ನಡುವಿಣ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಗೆಲುವಿಗಾಗಿ ಉಭಯ ತಂಡಗಳು ಹೋರಾಟ ನಡೆಸುತ್ತಿವೆ.

ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಮೊದಲ ಪಂದ್ಯದಲ್ಲಿ ನೀರಸ ಆಟವಾಡಿ ಸೋಲಿನ ಸುಳಿಯಲ್ಲಿ ಸಿಲುಕಿದ ಭಾರತ ತಂಡವು ಶನಿವಾರ ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳುವ ಭರವಸೆಯಲ್ಲಿದೆ.

ಕೇಪ್‌ಟೌನ್‌ನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ 72 ರನ್‌ಗಳ ಜಯ ಸಾಧಿಸಿದ ಆತಿಥೇಯರು ಮೂರು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಸಾಧಿಸಿದ್ದಾರೆ. ಸರಣಿ ಗೆಲುವಿನ ಆಸೆಯನ್ನು ಜೀವಂತ ಇರಿಸಬೇಕಾದರೆ ಭಾರತ ಎರಡನೇ ಪಂದ್ಯದಲ್ಲಿ ಗೆಲ್ಲಲೇಬೇಕು. ನಿರಂತರ ಒಂಬತ್ತು ಸರಣಿ ಗೆದ್ದು ದಾಖಲೆಯ ಹೊಸ್ತಿಲಿನಲ್ಲಿರುವುದರಿಂದಲೂ ಭಾರತಕ್ಕೆ ಇಲ್ಲಿ ಜಯ ಅನಿವಾರ್ಯವಾಗಿದೆ.

ಈ ಋತುವಿನಲ್ಲಿ ಭಾರತ ಒಟ್ಟು 12 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು ಇದಕ್ಕೆ ಆರಂಭದಲ್ಲೇ ವಿಘ್ನ ಕಾಡಿದೆ. ಹೀಗಾಗಿ ಎರಡನೇ ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ವಿರಾಟ್ ಕೊಹ್ಲಿ ಬಳಗ ಶ್ರಮಿಸಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry