ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಲಿಕಾಪ್ಟರ್ ಪತನ: ಪೈಲಟ್‌ ಸೇರಿ ಏಳು ಮಂದಿ ನಾಪತ್ತೆ

Last Updated 13 ಜನವರಿ 2018, 9:13 IST
ಅಕ್ಷರ ಗಾತ್ರ

ಮುಂಬೈ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (ಒಎನ್‌ಜಿಸಿ) ಐವರು ಉದ್ಯೋಗಿಗಳು ಮತ್ತು ಇಬ್ಬರು ಪೈಲಟ್‌ಗಳನ್ನೊಳಗೊಂಡ ಪವನ್ ಹನ್ಸ್ ಹೆಲಿಕಾಪ್ಟರ್ ಇಲ್ಲಿನ ಜುಹು ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.

ಬೆಳಿಗ್ಗೆ 10.20ಕ್ಕೆ ಹೊರಟ ಹೆಲಿಕಾಪ್ಟರ್ 10.58ಕ್ಕೆ ಒಎನ್‌ಜಿಸಿಯ ನಾರ್ತ್‌ ಫೀಲ್ಡ್‌ನಲ್ಲಿ ಇಳಿಯಬೇಕಿತ್ತು. ಆದರೆ, 10.35ರ ವೇಳೆಗೆ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಸಂಪರ್ಕ ಕಡಿದುಕೊಂಡಿದೆ. ಪತನದ ವೇಳೆ ಹೆಲಿಕಾಪ್ಟರ್ ಮುಂಬೈನಿಂದ 30 ನಾಟಿಕಲ್ ಮೈಲಿ ದೂರದಲ್ಲಿ ಸಂಚರಿಸುತ್ತಿತ್ತು.

ಎರಡು ಮೃತದೇಹಗಳು ಮತ್ತು ಹೆಲಿಕಾಪ್ಟರ್‌ನ ಕೆಲವು ಅವಶೇಷಗಳು ಪತ್ತೆಯಾಗಿವೆ ಎಂದು ಹೇಳಿರುವ ಭಾರತೀಯ ಕರಾವಳಿ ಪಡೆ, ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದೆ. ಈಗಾಗಲೇ ಘಟನೆ ನಡೆದ ಪ್ರದೇಶಕ್ಕೆ ಒಂದು ನೌಕೆ ಮತ್ತು ವಿಮಾನವನ್ನು ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದೂ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT