ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳೊಂದಿಗೆ ಚರ್ಚೆಗೆ 7 ಸದಸ್ಯರ ನಿಯೋಗ: ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ

7

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳೊಂದಿಗೆ ಚರ್ಚೆಗೆ 7 ಸದಸ್ಯರ ನಿಯೋಗ: ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ

Published:
Updated:
ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳೊಂದಿಗೆ ಚರ್ಚೆಗೆ 7 ಸದಸ್ಯರ ನಿಯೋಗ: ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ

ನವದೆಹಲಿ: ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟನ್ನು ಬಾಧಿಸುತ್ತಿರುವ ವಿಚಾರಗಳು ಹಾಗೂ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರ ವಿರುದ್ಧ ಪ್ರತಿಭಟನೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಇತರ ನ್ಯಾಯಮೂರ್ತಿಗಳೊಂದಿಗೆ ಚರ್ಚೆಗೆ 7 ಸದಸ್ಯರ ನಿಯೋಗ ರಚಿಸಲು ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ(ಬಿಸಿಐ) ಶನಿವಾರ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಸುಪ್ರೀಂ ಕೋರ್ಟ್‌ ಅವ್ಯವಸ್ಥೆ ಕುರಿತಾಗಿ ಎದ್ದಿರುವ ವಿಚಾರವಾಗಿ ಏಳು ಸದಸ್ಯರ ನಿಯೋಗ ಚರ್ಚಿಸಲಿದೆ ಎಂದು ಬಾರ್‌ ಕೌನ್ಸಿಲ್‌ ಅಧ್ಯಕ್ಷ ಮನನ್‌ ಕುಮಾರ್‌ ಮಿಶ್ರ ಹೇಳಿದರು.

ಪ್ರಸ್ತುತ ವಿಷಯವನ್ನು ರಾಜಕೀಯಗೊಳಿಸಿ ಪಕ್ಷ ಅಥವಾ ರಾಜಕೀಯ ನಾಯಕರು ಲಾಭ ಪಡೆಯಲು ಯತ್ನಿಸದಂತೆ ತಡೆಯಲು ಬಿಸಿಐ ನಿರ್ಣಯ ಕೈಗೊಂಡಿದೆ. 

ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್‌ಗೆ ಸಂಬಂಧಿಸಿದ ಇಂಥ ವಿಚಾರಗಳನ್ನು ಸಾರ್ವಜನಿಕಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್‌ ವಕೀಲರ ಸಂಘ ಅಭಿಪ್ರಾಯ ಪಟ್ಟಿದೆ.

ಸುಪ್ರೀಂ ಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿ ಜೆ. ಚಲಮೇಶ್ವರ್‌ ಅವರು ಮತ್ತು ನ್ಯಾಯಮೂರ್ತಿಗಳಾದ ರಂಜನ್‌ ಗೊಗೋಯ್‌, ಮದನ್‌ ಬಿ.ಲೋಕೂರ್‌ ಮತ್ತು ಕುರಿಯನ್‌ ಜೋಸೆಫ್‌ ಶುಕ್ರವಾರ ಮಾಧ್ಯಮಗೋಷ್ಠಿ ನಡೆಸಿ ಸುಪ್ರೀಂ ಕೋರ್ಟ್‌ನ ಅವ್ಯವಸ್ಥೆ ಹಾಗೂ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರ ವಿರುದ್ಧ ಪ್ರತಿಭಟನೆ ದಾಖಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry