ಬೈಕ್‌ಗೆ ಬೆಂಕಿ ಹಚ್ಚಿದ ಯುವಕನ ಬಂಧನ

7

ಬೈಕ್‌ಗೆ ಬೆಂಕಿ ಹಚ್ಚಿದ ಯುವಕನ ಬಂಧನ

Published:
Updated:

ಬೈಂದೂರು: ಗಂಗೊಳ್ಳಿ ಜುಮ್ಮಾ ಮಸೀದಿ ಬಳಿ ನಯೀಮ್ ಮನೆ ಎದುರು ಶುಕ್ರವಾರ ರಾತ್ರಿ ನಿಲ್ಲಿಸಿದ್ದ ಬೈಕ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪರಾರಿ ಆಗುತ್ತಿದ್ದ ಗುರುರಾಜ ಖಾರ್ವಿ(28) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗೊಳ್ಳಿಯಲ್ಲಿ ಭಾನುವಾರ ಮತ್ತು ಸೋಮವಾರ ರಾತ್ರಿ ವೇಳೆ ಮುಸ್ಲಿಂರ ಮನೆ ಎದುರು ನಿಲ್ಲಿಸಿದ್ದ  ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದರಿಂದ ಗಂಗೊಳ್ಳಿಯಲ್ಲಿ ಪರಿಸ್ಥಿತಿ ಉದ್ವಿ‌ಗ್ನವಾಗಿತ್ತು.

ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತ ಹಾಗೂ ಮಂಗಳೂರಿನ ದೀಪಕ್ ರಾವ್ ಕೊಲೆಯಿಂದ ಆಕ್ರೋಶಗೊಂಡು, ದ್ವೇಷ ತಿರಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಮಾಡಿರುವುದಾಗಿ ಆರೋಪಿಯು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೈಕ್‌ಗೆ ಬೆಂಕಿ ಹಚ್ಚಿದ ಪ್ರಕರಣಗಳಿಂದಾಗಿ ಗಂಗೊಳ್ಳಿಯಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಪೊಲೀಸ್ ಬಿಗಿ ಬಂದೋಬಸ್ತ್ ಕೂಡಾ ಮಾಡಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry