16ರಂದು ಅಲ್ಪಸಂಖ್ಯಾತರ ಸಮಾವೇಶ

7

16ರಂದು ಅಲ್ಪಸಂಖ್ಯಾತರ ಸಮಾವೇಶ

Published:
Updated:

ಬೆಂಗಳೂರು: ಕಾಂಗ್ರೆಸ್‍ನ ಅಲ್ಪಸಂಖ್ಯಾತ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಕೆ.ಜಿ.ಹಳ್ಳಿಯ ಸಿಎಂಎ ಗ್ರ್ಯಾಂಡ್ ಕನ್ವೆನ್ಷನ್ ಸಭಾಂಗಣದಲ್ಲಿ ಇದೇ 16 ರಂದು ಹಮ್ಮಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಘಟಕದ ಅಧ್ಯಕ್ಷ ಇರ್ಷಾದ್ ಅಹಮ್ಮದ್ ಶೇಕ್, ‘ಐದು ವರ್ಷಗಳ ಆಡಳಿತಾವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹ 3,850 ಕೋಟಿ ಮೀಸಲಿಟ್ಟಿದೆ. ಸರ್ಕಾರದ ಸಾಧನೆಗಳನ್ನು ಸಮುದಾಯದ ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಿದ್ದೇವೆ’ ಎಂದರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry