ರಸ್ತೆ ಡಾಂಬರೀಕರಣಕ್ಕೆ ಚಾಲನೆ

6

ರಸ್ತೆ ಡಾಂಬರೀಕರಣಕ್ಕೆ ಚಾಲನೆ

Published:
Updated:

ಬೆಂಗಳೂರು: ಮಹದೇವಪುರ ಕ್ಷೇತ್ರದ ದೊಡ್ಡನೆಕ್ಕುಂದಿ ವಾರ್ಡ್‍ನ ಬಾಲಾಜಿ ಬಡಾವಣೆಯಲ್ಲಿ ₹60 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣಕ್ಕೆ ಪಾಲಿಕೆ ಸದಸ್ಯೆ ಶ್ವೇತಾ ವಿಜಯಕುಮಾರ್ ಚಾಲನೆ ನೀಡಿದರು.

ಪಾಲಿಕೆ ವತಿಯಿಂದ ಕಡಿಮೆ ಅನುದಾನ ಬಿಡುಗಡೆಯಾಗಿದೆ. ಸ್ಥಳೀಯ ಶಾಸಕರ ಅನುದಾನದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ. ಮುಖ್ಯರಸ್ತೆಗಳ ಜತೆಗೆ ಅಡ್ಡರಸ್ತೆಗಳನ್ನೂ ಡಾಂಬರೀಕರಣ ಮಾಡಲಾಗಿದೆ. ಹೊಸದಾಗಿ ನಿರ್ಮಾಣವಾಗಿರುವ ಬಡಾವಣೆಗಳ ರಸ್ತೆಗಳಿಗೆ ಡಾಂಬರು ಹಾಕಬೇಕಿದೆ ಎಂದು ಶ್ವೇತಾ ತಿಳಿಸಿದರು.

ರಸ್ತೆ ಬದಿಯ ಚರಂಡಿಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೇ ಶೇ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದರು.

ರಸ್ತೆ ಕಾಮಗಾರಿಯು ಕಳಪೆ ಗುಣಮಟ್ಟದಿಂದ ಕೂಡಿದ್ದರೆ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry