ಒಳ ಮೀಸಲಾತಿ ಕೃಷ್ಣಾದಲ್ಲಿ ಇಂದು ಸಭೆ

6

ಒಳ ಮೀಸಲಾತಿ ಕೃಷ್ಣಾದಲ್ಲಿ ಇಂದು ಸಭೆ

Published:
Updated:

ಬೆಂಗಳೂರು: ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ (ಜ.14) ಮಹತ್ವದ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ದಲಿತ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಿಸಲಾಗಿದ್ದ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಮಾದಿಗ ಸಮುದಾಯ ಒತ್ತಾಯಿಸುತ್ತಿದೆ.

ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಳ ಮೀಸಲಾತಿ ವಿಷಯ ಪ್ರಸ್ತಾವಗೊಂಡು, ಬಲಗೈ ಮತ್ತು ಎಡಗೈ ಬಣಗಳ ಮಧ್ಯೆ ವಾಗ್ವಾದ ನಡೆದಿತ್ತು. ಅಧಿವೇಶನ ಮುಗಿದ ಬಳಿಕ ಪ್ರಮುಖರ ಸಭೆ ಕರೆದು ಸಮಾಲೋಚಿಸಿದ ಬಳಿಕ ಸಂಪುಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry