ಪ್ರತ್ಯೇಕ ಅಪಘಾತ: 11 ಮಂದಿ ಸಾವು

5

ಪ್ರತ್ಯೇಕ ಅಪಘಾತ: 11 ಮಂದಿ ಸಾವು

Published:
Updated:
ಪ್ರತ್ಯೇಕ ಅಪಘಾತ: 11 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 11 ಮಂದಿ ಮೃತಪಟ್ಟಿದ್ದಾರೆ.

7 ಮಂದಿ ಸಾವು: ಹಾಸನ ತಾಲ್ಲೂಕಿನ ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಳಗಿನ ಜಾವ 3.30ರ ಸಮಯದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಐರಾವತ ಬಸ್ ರಸ್ತೆ ಬದಿಯ 20 ಅಡಿ ಆಳಕ್ಕೆ ಬಿದ್ದು ಚಾಲಕ ಮತ್ತು ನಿರ್ವಾಹಕ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮೃತರ ಕುಟುಂಬಕ್ಕೆ ತಲಾ ₹ 3 ಲಕ್ಷ ಪರಿಹಾರ ಹಾಗೂ ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ನಿಗಮದಿಂದ ಭರಿಸಲಾಗುವುದು ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ತಿಳಿಸಿದ್ದಾರೆ.

ಮೂವರ ಸಾವು: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಗಾಜಲಬಾವಿ ಗ್ರಾಮದ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ. ನಾಲ್ವರು ಗಾಯಗೊಒಂಡಿದ್ದಾರೆ.

ಒಬ್ಬ ಸಾವು: ಕಾರವಾರ ತಾಲ್ಲೂಕಿನ ಚೆಂಡಿಯಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಒಬ್ಬರು  ಮೃತಪಟ್ಟಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry