ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆಯೋಜನೆ

7

ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆಯೋಜನೆ

Published:
Updated:
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆಯೋಜನೆ

ಮಧುರೈ: ತಮಿಳುನಾಡಿನ ಮಧುರೈನಲ್ಲಿ ಭಾನುವಾರ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸಲಾಗಿದೆ.

ಭಾಗವಹಿಸಿರುವ ಸ್ಪರ್ಧಾಳುಗಳು ಹೋರಿಯನ್ನು ಮಣಿಸಲು ಉತ್ಸಾಹದಿಂದ ಯತ್ನಿಸುತ್ತಿದ್ದು, ಹೋರಿಗಳು ಯುವಕರನ್ನು ಕೊಂಬಿನಲ್ಲಿ ಚಿಮ್ಮಿ ತಪ್ಪಿಸಿಕೊಂಡು ಹೊರ ಹೋಗುತ್ತಿವೆ. ಆದರೂ ಸ್ಪರ್ಧಾಳುಗಳು ಶತ ಪ್ರಯತ್ನ ನಡೆಸುತ್ತಿದ್ದಾರೆ. 

ಸಂಕಾಂತಿ ಅಂಗವಾಗಿ ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸಲಾಗುತ್ತದೆ.

ಜಲ್ಲಿಕಟ್ಟು ಕ್ರೀಡೆ ಆಯೋಜನೆಗೆ ಇದ್ದ ತೊಡಕುಗಳನ್ನು ನಿವಾರಿಸುವ ಮಸೂದೆಯನ್ನು ತಮಿಳುನಾಡಿನ ವಿಧಾನಸಭೆಯಲ್ಲಿ 2017ರ ಜನವರಿಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.

ವಿಧಾನಸಭೆ ಅಂಗೀಕರಿಸಿದ್ದ ಮಸೂದೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದರಿಂದ ಜಲ್ಲಿಕಟ್ಟು ಅಭಿಮಾನಿಗಳ ಆತಂಕ ದೂರವಾಗಿತ್ತು.
ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರಕಾರದ ಆದ್ಯ ಕರ್ತವ್ಯ ಆಗಿರುವುದರಿಂದ ಬೀದಿಯಲ್ಲಿ ದಾಂದಲೆ ನಡೆಯಲು ಅವಕಾಶ ನೀಡಬಾರದು ಎಂದು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿತ್ತು.

ತಮಿಳುನಾಡಿನಲ್ಲಿ ಜಲ್ಲಿಕಟ್ಟಿಗೆ ಅವಕಾಶ ಕಲ್ಪಿಸುವ 2016ರ ಜ. 7ರ ಸುಗ್ರೀವಾಜ್ಞೆಯನ್ನು ವಾಪಸ್ ಪಡೆಯಲು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry