ಶಾದಿಮಹಲ್ ಕಾಮಗಾರಿಗೆ ಭೂಮಿಪೂಜೆ

7

ಶಾದಿಮಹಲ್ ಕಾಮಗಾರಿಗೆ ಭೂಮಿಪೂಜೆ

Published:
Updated:

ಸಿಂಧನೂರು: ‘ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಿ ಜನಾಂಗದ ಆರ್ಥಿಕ ಸ್ಥಿತಿ ಗತಿ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಪ್ರಗತಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದೆ’ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.

ಅವರು ಶುಕ್ರವಾರ ನಗರದ ಒಂದನೇ ವಾರ್ಡ್‌ನಲ್ಲಿ ₹ 18ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶಾದಿಮಹಲ್ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಸಿಂಧನೂರು ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾಲ್ಕೂವರೆ ವರ್ಷಗಳಲ್ಲಿ ಸತತ ಪ್ರಯತ್ನ ಮಾಡಿದ್ದು, ಅದರಂಗವಾಗಿ ತಾಲ್ಲೂಕಿನಲ್ಲಿ ಶಾಲಾ ಕಟ್ಟಡಗಳು, ರಸ್ತೆಗಳು, ಏತ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ವಿದ್ಯುತ್ ಸೌಲಭ್ಯ ಜನಪರ ಯೋಜನೆಗಳು ಸಾಕಾರಗೊಂಡಿವೆ’ ಎಂದು ವಿವರಿಸಿದರು.

ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ್, ನಯೋಪ್ರಾ ಅಧ್ಯಕ್ಷ ಎಂ.ಕಾಳಿಂಗಪ್ಪ ವಕೀಲ, ಸ್ಥಾಯಿ ಸಮಿತಿ ಅಧ್ಯಕ್ಷ ನಬೀಸಾಬ್, ಸದಸ್ಯರಾದ ಪ್ರಭುರಾಜ, ವೆಂಕಟೇಶ ದತ್ತುರಾವ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿಮಲಿಕ್ ವಕೀಲ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ಪೌರಾಯುಕ್ತ ವಿರೂಪಾಕ್ಷ ಮೂರ್ತಿ, ಎಇಇ ಶ್ಯಾಮಲಾ, ಮುಖಂಡರಾದ ಮಹ್ಮದ್‌ಸಾಬ್ ಮುಸ್ತಫಾ ಜ್ಯುವೆಲರ್ಸ್, ಅಲಿಮೇಸ್ತ್ರಿ, ಸಾಬೀರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry