ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 100 ರನ್‌ ಭರ್ಜರಿ ಜಯ

7

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 100 ರನ್‌ ಭರ್ಜರಿ ಜಯ

Published:
Updated:
ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 100 ರನ್‌ ಭರ್ಜರಿ ಜಯ

ಮೌಂಟ್‌ ಮಾಂಗನೂಯಿ: ಇಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತ 100 ರನ್‌ ಭರ್ಜರಿ ಜಯ ಸಾಧಿಸಿದೆ.

ಭಾನುವಾರ ನಡೆದ ಪಂದ್ಯದಲ್ಲಿ ‌ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 328 ರನ್‌ ಗಳಿಸಿತು. ಭಾರತ ತಂಡದ ನಾಯಕ ಪೃಥ್ವಿ ಶಾ (94) ಹಾಗೂ ಮನಜೋತ್​ ಕಾಲ್ರಾ (86), ಹಾಗೂ ಶುಭಮಾನ್​ ಗಿಲ್​ (63) ಉತ್ತಮ ಬ್ಯಾಟಿಂಗ್‌ ನೇರವಿನಿಂದ ಬೃಹತ್‌ ಮೊತ್ತ ಗಳಿಸಿತು. 

ಈ ಗುರಿಯನ್ನು ಬೆನ್ನತಿದ್ದ ಆಸ್ಟ್ರೇಲಿಯಾ 228 ರನ್‌ ಗಳಿಸಿ ಆಲೌಟ್‌ ಆಗಿದೆ. ಭಾರತ ತಂಡದ ನಾಯಕ ಪೃಥ್ವಿ ಶಾ ಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಕಳೆದ ಬಾರಿ ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತ ಭಾರತ ತಂಡಕ್ಕೆ ಈ ಬಾರಿ ಬ್ಯಾಟಿಂಗ್ ಮಾಂತ್ರಿಕ ರಾಹುಲ್ ದ್ರಾವಿಡ್ ತರಬೇತಿ ನೀಡಿದ್ದಾರೆ. ಪೃಥ್ವಿ ಶಾ ನಾಯಕತ್ವದಲ್ಲಿ ಪ್ರತಿಭಾವಂತ ಆಟಗಾರರು ಇರುವುದರಿಂದ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದೇ ಬಿಂಬಿತವಾಗಿದೆ. ಟೂರ್ನಿ ಆರಂಭವಾಗುವುದಕ್ಕೂ ಒಂದು ವಾರ ಮೊದಲೇ ಇಲ್ಲಿಗೆ ಬಂದಿರುವ ತಂಡ ಪರಿಸ್ಥಿತಿಗೆ ಚೆನ್ನಾಗಿ ಹೊಂದಿಕೊಂಡಿರುವುದು ಕೂಡ ವಿಶ್ವಾಸ ಹೆಚ್ಚಲು ಕಾರಣವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry