‘ಚಂದ್ರಕಲಾ ರಾಜೀನಾಮೆ ಅಂಗೀಕರಿಸಿಲ್ಲ’

7

‘ಚಂದ್ರಕಲಾ ರಾಜೀನಾಮೆ ಅಂಗೀಕರಿಸಿಲ್ಲ’

Published:
Updated:
‘ಚಂದ್ರಕಲಾ ರಾಜೀನಾಮೆ ಅಂಗೀಕರಿಸಿಲ್ಲ’

ಹಾಸನ : ಕಾಂಗ್ರೆಸ್ ಮುಖಂಡರಾದ ಬಿ.ಕೆ. ಚಂದ್ರಕಲಾ ನೀಡಿರುವ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕಾರ ಮಾಡಿಲ್ಲ. ಅವರು ಪಕ್ಷದಲ್ಲೇ ಇದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್‌ ಸ್ಪಷ್ಟನೆ ನೀಡಿದರು.

ಚಂದ್ರಕಲಾ ಅವರ ಜತೆ ಈಗಾಗಲೇ ಮಾತುಕತೆ ನಡೆಸಲಾ ಗಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಯಾವುದೇ ಪಕ್ಷಕ್ಕೂ ಅವರು ಸೇರುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯ ಏಳು ವಿಧಾನ ಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ. ಜಿ.ಪುಟ್ಟಸ್ವಾಮಿಗೌಡರ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಯಾವ ವಾತಾವರಣವಿತ್ತೋ ಅದೇ ವಾತಾವರಣ ಈ ಬಾರಿಯ ಚುನಾವಣೆಯಲ್ಲಿ ಮರುಕಳಿಸಲಿದೆ. ಎಲ್ಲಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುವ ವಿಧಾನ ಸಭಾ ಚುನಾವಣೆಯನ್ನು ಎದುರಿಸಲಾಗುವುದು ಎಂದು ಹೇಳಿದರು.

ಎಲ್ಲಾ ವಿಧಾನ ಸಭಾ ಕ್ಷೇತ್ರದಲ್ಲಿಯೂ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಬೇಲೂರು ಕ್ಷೇತ್ರದಲ್ಲಿ ಬಿ.ಶಿವರಾಂ ಅವರು ಪಕ್ಷ ಒಡೆಯುವ ಕೆಲಸ ಮಾಡಿಲ್ಲ. ನಾಯಕರಾಗಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿಕೊಂಡು ಬಂದಿದ್ದಾರೆ. ರುದ್ರೇಶಗೌಡರು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿರುವ ವಿಷಯ ಮಾತುಕತೆ ಮೂಲಕ ಬಗೆಹರಿಸಲಾಗಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ನುಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮೋಹನ್, ಕೆಪಿಸಿಸಿ ಸದಸ್ಯ ಎಚ್.ಕೆ.ಮಹೇಶ್. ಹುಡಾ ಅಧ್ಯಕ್ಷ ಎಚ್.ಆರ್.ಕೃಷ್ಣ ಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಮುಖಂಡ ಮುನಿಸ್ವಾಮಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry