ಕರ್ನಾಟಕದವರು ಹರಾಮಿಗಳು: ಗೋವಾ ನೀರಾವರಿ ಸಚಿವ ವಿನೋದ ಪಾಳೇಕರ ಹೇಳಿಕೆ

7

ಕರ್ನಾಟಕದವರು ಹರಾಮಿಗಳು: ಗೋವಾ ನೀರಾವರಿ ಸಚಿವ ವಿನೋದ ಪಾಳೇಕರ ಹೇಳಿಕೆ

Published:
Updated:
ಕರ್ನಾಟಕದವರು ಹರಾಮಿಗಳು: ಗೋವಾ ನೀರಾವರಿ ಸಚಿವ ವಿನೋದ ಪಾಳೇಕರ ಹೇಳಿಕೆ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಕಳಸಾ ನಾಲಾ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಳೇಕರ 'ಕರ್ನಾಟಕದವರು ಹರಾಮಿಗಳು' ಎಂದು ಹೇಳಿಕೆ ನೀಡಿದ್ದಾರೆ.

ಕಣಕುಂಬಿ ಬಳಿ ಕಳಸಾ ನಾಲಾ ಕಾಮಗಾರಿ ಪರಿಶೀಲಿಸಿ, ರಾಜ್ಯ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದೆ. ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರು ಬಿ.ಜೆ.ಪಿ. ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರಿಗೆ ಬರೆದ ಪತ್ರ ನ್ಯಾಯಾಲಯದ ಆದೇಶ ಅಲ್ಲ ಎಂದಿದ್ದಾರೆ.

ಮಹದಾಯಿ ನಮ್ಮ ತಾಯಿ. ಕರ್ನಾಟಕದಲ್ಲಿ ರೈತರು ಪ್ರತಿಭಟನೆ ಮಾಡಿದರೆ ನಮಗೇನು? ಮಹದಾಯಿ ವಿವಾದ ಪ್ರಕರಣ ನ್ಯಾಯಾಧೀಕರಣದಲ್ಲಿ ಇತ್ಯರ್ಥವಾಗುವವರೆಗೆ ನೀರು ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿ ಗೋವಾಗೆ ಮರಳಿದ ಮಂತ್ರಿ ಪಾಳೇಕರ್ ಅಲ್ಲಿ ಕನ್ನಡಿಗರನ್ನು ಟೀಕಿಸಿದ್ದಾರೆ.

ಕಳಸಾ ಕಾಮಗಾರಿ ವೀಕ್ಷಣೆಗೆ ಪೊಲೀಸ್ ಬಂದೋಬಸ್ತಿನಲ್ಲಿ ಹೋಗಿದ್ದು ಏಕೆಎಂದು ಪ್ರಶ್ನೆ ಮಾಡಿದ ಗೋವಾ ಪತ್ರಕರ್ತರಿಗೆ ಪ್ರತಿಕ್ರಿಯಿಸಿದ ಸಚಿವರು,

‘ಕರ್ನಾಟಕದವರು ಹರಾಮಿಗಳು. ಆದ್ದರಿಂದ ಪೊಲೀಸ್ ಬಂದೋಬಸ್ತಿನಲ್ಲಿ ಹೋಗಿದ್ದೆ ಎಂದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಮಧ್ಯಪ್ರವೇಶಿಸಬೇಕು

ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮುಗಳಖೋಡದ ಜಿಡಗಾ ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರಕರ್ತರೊಂದಿಗೆ ಮಾತನಾಡಿ, ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಕೂಡ ಕಳಸಾ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry