ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರನ್‌ವೇಯಿಂದ ಜಾರಿ ಸಮುದ್ರದತ್ತ ನುಗ್ಗಿದ ವಿಮಾನ: ತಪ್ಪಿದ ದುರಂತ

Last Updated 14 ಜನವರಿ 2018, 13:16 IST
ಅಕ್ಷರ ಗಾತ್ರ

ಅಂಕಾರ: ವಿಮಾನವೊಂದು ಭೂಸ್ಪರ್ಶದ ಬಳಿಕ ರನ್‌ವೇಯಿಂದ ಜಾರಿ‌ ಕೆಲವು ಅಡಿಗಳಷ್ಟು ತಗ್ಗು ಪ್ರದೇಶಕ್ಕೆ ಸರಿದಿದ್ದು ಸಮುದ್ರಕ್ಕೆ ಬೀಳುವುದರಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ಉತ್ತರ ಟರ್ಕಿಯ ಟ್ರಬ್ಜೊನ್‌ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಭಾರಿ ದುರಂತವೊಂದು ತಪ್ಪಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ವಿಮಾನದಲ್ಲಿ 162 ಮಂದಿ ಪ್ರಯಾಣಿಕರು, ಇಬ್ಬರು ಪೈಲಟ್‌ ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ಎಲ್ಲರನ್ನೂ ವಿಮಾನದಿಂದ ಸುರಕ್ಷಿತವಾಗಿ ಹೊರ ಕರೆತರಲಾಗಿದೆ.

ವಿಮಾನ ನಿಲ್ದಾಣದ ಕೆಳಭಾಗದಲ್ಲಿ ಸಮುದ್ರವಿದೆ. ರನ್‌ವೇಯಿಂದ ಜಾರಿದ ವಿಮಾನ ತಲೆಕೆಳಗಾಗಿ ಸಮುದ್ರದತ್ತ ಜಾರಿದ ಚಿತ್ರವನ್ನು ಸ್ಥಳೀಯ ಮಾಧ್ಯಮಗಳು ಪ್ರಕಟಿಸಿವೆ. ವಿಮಾನದ ಚಕ್ರಗಳು ಮಣ್ಣಿನಲ್ಲಿ ಹೂತಿವೆ. ಇಲ್ಲದಿದ್ದಲ್ಲಿ ವಿಮಾನ ಸಮುದ್ರಕ್ಕೆ ಬೀಳುವ ಅಪಾಯವಿತ್ತು.

ಪೆಗಾಸಸ್‌ ಏರ್‌ಲೈನ್ಸ್‌ಗೆ ಸೇರಿದ ವಿಮಾನ ಅಂಕಾರದಿಂದ ಹೊರಟು ಟ್ರಬ್ಜೊನ್‌ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿತ್ತು.

ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಂದು ಟ್ರಬ್ಜೊನ್‌ ಗವರ್ನರ್‌ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT