‘ಬಡ ವಿದ್ಯಾರ್ಥಿಗಳ ಅವಕಾಶ ಕಸಿಯುವ ಯತ್ನ’

7

‘ಬಡ ವಿದ್ಯಾರ್ಥಿಗಳ ಅವಕಾಶ ಕಸಿಯುವ ಯತ್ನ’

Published:
Updated:

ಬೆಂಗಳೂರು: ‘ಬಡ ಮಕ್ಕಳು ಖಾಸಗಿ ಶಾಲೆಗಳಲ್ಲಿ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ಪಡೆಯುವ ಅವಕಾಶ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ. ಅದಕ್ಕಾಗೇ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ನಿಯಮ ಬದಲಾಯಿಸಲು ಹೊರಟಿದೆ’ ಎಂದು ನಿವೃತ್ತ ಐಎಎಸ್‌ ಅಧಿಕಾರಿ ರೇಣುಕಾ ವಿಶ್ವನಾಥನ್‌ ಆರೋಪಿಸಿದರು.

‘ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಈ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವವರೆಗೆ, ಬಡ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಅವಕಾಶ ಮಾಡಿಕೊಬೇಕು’ ಎಂದು ಅವರು ಒತ್ತಾಯಿಸಿದರು.

‘ಅಧಿಕಾರದಲ್ಲಿ ಇರುವವರು ಪ್ರಯತ್ನಪಟ್ಟರೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬಹುದು. ನವದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷದ ಸರ್ಕಾರ ಇದನ್ನು ಸಾಬೀತುಪಡಿಸಿದೆ. ರಾಜ್ಯವೂ ದೆಹಲಿ ಮಾದರಿಯನ್ನು ಅನುಸರಿಸಬಹುದು’ ಎಂದು ಪಕ್ಷದ ರಾಜ್ಯ ಸಹ ಸಂಚಾಲಕ ಮೋಹನ್‌ ದಾಸರಿ ಸಲಹೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry