ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Last Updated 14 ಜನವರಿ 2018, 19:41 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಉಗ್ರಗಾಮಿಗಳು’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ ಬಿಜೆಪಿ ಯಲಹಂಕ ಕ್ಷೇತ್ರ ಘಟಕದ ಕಾರ್ಯಕರ್ತರು ಇಲ್ಲಿನ ಪೊಲೀಸ್‌ ಠಾಣೆ ವೃತ್ತದಲ್ಲಿ ಜೈಲ್‌ ಭರೋ ಚಳವಳಿ ನಡೆಸಿದರು.

ಚುನಾವಣೆ ಸಮೀಪಿಸುತ್ತಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ. ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವುಕ್ಕಾಗಿ ಹಿಂದುಪರ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಕರೆದಿದ್ದಾರೆ ಎಂದು ಶಾಸಕ ಎಸ್‌.ಆರ್‌.ವಿಶ್ವನಾಥ್‌ ದೂರಿದರು.

ಸಮಾಜ ಒಡೆಯುವ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು ಕೂಡಲೇ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

‘ನಾವೂ ಉಗ್ರರು ನಮ್ಮನ್ನೂ ಬಂಧಿಸಿ’ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ರಸ್ತೆ ತಡೆ ನಡೆಸಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT