ನಿಯಂತ್ರಣ ಪ್ರಾಧಿಕಾರಗಳಿಗೆ ನೇಮಕ: ಅಭ್ಯರ್ಥಿಗಳ ಹಿನ್ನೆಲೆ ಪರಿಶೀಲನೆ ಕಡ್ಡಾಯ

7

ನಿಯಂತ್ರಣ ಪ್ರಾಧಿಕಾರಗಳಿಗೆ ನೇಮಕ: ಅಭ್ಯರ್ಥಿಗಳ ಹಿನ್ನೆಲೆ ಪರಿಶೀಲನೆ ಕಡ್ಡಾಯ

Published:
Updated:

ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ), ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದಂತಹ ಸಂಸ್ಥೆಗಳು ಮತ್ತು ನ್ಯಾಯಮಂಡಳಿಗಳಿಗೆ ಮುಖ್ಯಸ್ಥರು ಮತ್ತು ಸದಸ್ಯರ ನೇಮಕ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ನೇಮಕಕ್ಕೆ ಸಂಭಾವ್ಯ ಪಟ್ಟಿ ಸಿದ್ಧಪಡಿಸಿದ ಬಳಿಕ ಪಟ್ಟಿಯಲ್ಲಿರುವವರ ಹಿನ್ನೆಲೆಯ ಬಗ್ಗೆ ಗುಪ್ತಚರ ಘಟಕದಿಂದ ಪರಿಶೀಲನೆ ನಡೆಸಬೇಕು ಎಂಬ ನಿಯಮ ರಚಿಸಲಾಗಿದೆ.

ಮುಖ್ಯಸ್ಥರು ಮತ್ತು ಸದಸ್ಯರ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಆಯ್ಕೆ ಸಮಿತಿಗಳು ಅಥವಾ ಶೋಧ ಸಮಿತಿಗಳು ಆರಂಭಿಸುತ್ತವೆ. ಮೊದಲ ಹಂತದಲ್ಲಿ, ಖಾಲಿ ಇರುವ ಹುದ್ದೆಗಳಿಗೆ ಎರಡು ಅಥವಾ ಮೂರರ ಅನುಪಾತದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುತ್ತದೆ.

ಸಂಭಾವ್ಯ ಪಟ್ಟಿ ಸಿದ್ಧವಾದ ನಂತರ ಈ ಅಭ್ಯರ್ಥಿಗಳ ನಡವಳಿಕೆ ಮತ್ತು ಹಿನ್ನೆಲೆಯನ್ನು ಪರಿಶೀಲಿಸಬೇಕು ಎಂದು ಸಿಬ್ಬಂದಿ ಸಚಿವಾಲಯವು ಕೇಂದ್ರದ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ. ಗುಪ್ತಚರ ಘಟಕವು ಅಭ್ಯರ್ಥಿಗಳ ಬಗ್ಗೆ ನೀಡುವ ವರದಿಯನ್ನು ಆಧಾರವಾಗಿ ಇರಿಸಿಕೊಂಡು ಅಂತಿಮ ಪಟ್ಟಿ ಸಿದ್ಧಪಡಿಸಿ ಸಂಪುಟದ ನೇಮಕಾತಿ ಸಮಿತಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry