‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ’

7
ದೇವನಹಳ್ಳಿ: ಕಾಂಗ್ರೆಸ್ ಹಿಂದುಳಿದ ವರ್ಗ ಪದಾಧಿಕಾರಿಗಳ ನೇಮಕ ಆದೇಶ ಪತ್ರ ವಿತರಣೆ

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ’

Published:
Updated:
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ’

ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದ ಅಲ್ಪಸಂಖ್ಯಾತರಿಗೂ ಸ್ಥಾನ ಮಾನ ನೀಡಿ ಸಮಾನ ಅವಕಾಶ ಕಲ್ಪಿಸಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗ ಜಿಲ್ಲಾ ಘಟಕದ ಅಧ್ಯಕ್ಷ ನಾಗಮಂಗಲ ಅಪ್ಪಣ್ಣ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗ ಪದಾಧಿಕಾರಿಗಳ ನೇಮಕ ಅದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಕ್ಷ ನಿಷ್ಠೆ ಮತ್ತು ಸಂಘಟನೆ ದೃಷ್ಟಿಯಿಂದ ಅರ್ಹ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜಾತಿ ಮತ್ತು ವರ್ಗದ ಆಧಾರದಲ್ಲಿ ನೇಮಕ ಮಾಡಿಲ್ಲ ಎಂದು ತಿಳಿಸಿದರು.

ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯಘಟಕದ ರಾಜ್ಯ ಅಧ್ಯಕ್ಷ ಎಂ.ಡಿ ಲಕ್ಷ್ಮಿನಾರಾಯಣ ಮತ್ತು ಸಂಸದ ವೀರಪ್ಪ ಮೊಯಿಲಿ ಹಿಂದುಳಿದ ವರ್ಗದ ಸಮುದಾಯ ಹಾಗೂ ಇತರೆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಲ್ಕುವರೆ ವರ್ಷದ ಅವಧಿಯಲ್ಲಿ ಹಿಂದುಳಿದ ವರ್ಗಕ್ಕೆ ನೀಡಿರುವಷ್ಟು ಅನುದಾನ ಮತ್ತು ಮೂಲ ಸೌಲಭ್ಯ ಈವರೆಗಿನ ಶ್ರೇಷ್ಠದಾಖಲೆ ಎಂದೇ ಹೇಳಬೇಕು ಎಂದರು.

ಬಿಜೆಪಿ ಕಾಂಗ್ರೆಸ್ ವಿರುದ್ಧ ಕೆಟ್ಟ ಭಾಷೆ ಬಳಸಿ ಹೇಳಿಕೆ ನೀಡಿದರೂ ಅವರ ಮಟ್ಟಕ್ಕೆ ಹೋಗಬಾರದು ಎಂದು ಸಲಹೆ ನೀಡಿದರು.

ನಡೆ ಮತ್ತು ನುಡಿ ವ್ಯಕ್ತಿತ್ವವನ್ನು ತೋರಿಸುತ್ತದೆ. ಪದಗಳ ಬಳಕ್ಕೆ ಬಗ್ಗೆ ಹಿಡಿತವಿರಬೇಕು. ಕಾಂಗ್ರೆಸ್ ಪಕ್ಷಕ್ಕೆ ಶತಮಾನದ ಸಿದ್ಧಾಂತವಿದೆ ಪಕ್ಷದಲ್ಲಿ ಆದ್ಯತೆಯ ಮೇರೆಗೆ ಹುದ್ದೆಗಳು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ, ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡುವ ಗುರುತರ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಪ್ರತಿಯೊಂದು ಘಟಕದ ಜವಬ್ದಾರಿಯಾಗಿದೆ ಎಂದರು.

ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ,ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಕೈಯನ್ನು ಮತದಾರರು ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗದ ಕಾಂಗ್ರೆಸ್ ಬ್ಲಾಕ್ ಘಟಕದ ಉಪಾಧ್ಯಕ್ಷ ಟಿ.ಎನ್.ಮುನಿರಾಜು ಮತ್ತು ಕಾರ್ಯದರ್ಶಿ ಬಸವರಾಜ್ ಹಾಗೂ ಇತರೆ ಘಟಕ ಪದಾಧಿಕಾರಿಗಳಿಗೆ ನೇಮಕ ಆದೇಶ ಪತ್ರ ವಿತರಿಸಲಾಯಿತು.

ಹಿಂದುಳಿದ ವರ್ಗ ಕಾಂಗ್ರೆಸ್ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜ್ ಗೋಪಾಲ್ ,ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ ಮಂಜುನಾಥ್, ಕೆಪಿಸಿಸಿ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್‌, ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ರವಿಕುಮಾರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಾರುತಿ, ಕಾಂಗ್ರೆಸ್‌ ತಾಲ್ಲೂಕು ಸಂಚಾಲಕ ನರಸಪ್ಪ, ಭೂನ್ಯಾಯ ಮಂಡಳಿ ಸದಸ್ಯರಾದ ಮುನಿರಾಜು, ಸೋಮಣ್ಣ, ವಿಜಯಪುರ ಹೋಬಳಿ ಕಾಂಗ್ರೆಸ್‌ ಘಟಕದ ಉಪಾಧ್ಯಕ್ಷ ಡೇವಿಡ್‌ ನಾರಾಯಣಸ್ವಾಮಿ, ಕಾಂಗ್ರೆಸ್‌ ಎಸ್ಸಿ ಘಟಕದ ತಾಲ್ಲೂಕು ಅಧ್ಯಕ್ಷ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಆನಂದ್‌ ಕುಮಾರ್‌, ಮುಖಂಡರಾದ ಚಿನ್ನಪ್ಪ, ಜಾಲಿಗೆ ಮುನಿರಾಜು, ಎಚ್‌.ಕೆ.ವೆಂಕಟೇಶಪ್ಪ, ಪಟಾಲಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry