ಜೈಷ್–ಎ–ಮೊಹಮ್ಮದ್ ಸಂಘಟನೆಯ ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

7

ಜೈಷ್–ಎ–ಮೊಹಮ್ಮದ್ ಸಂಘಟನೆಯ ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Published:
Updated:
ಜೈಷ್–ಎ–ಮೊಹಮ್ಮದ್ ಸಂಘಟನೆಯ ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದ ಜೈಷ್–ಎ–ಮೊಹಮ್ಮದ್ ಸಂಘಟನೆಗೆ ಸೇರಿದ ಐವರು ಉಗ್ರರನ್ನು ಉರಿ ವಲಯದ ಬರಮುಲ್ಲಾ ಜಿಲ್ಲೆಯ ದುಲಂಜಾ ಗ್ರಾಮದಲ್ಲಿ ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ, ಕೇಂದ್ರೀಯ ಸಶಸ್ತ್ರ ಅರೆಸೇನಾ ಪಡೆ(ಸಿಎಪಿಎಫ್) ನಡೆಸಿದ ಕಾರ್ಯಾಚರಣೆಯಲ್ಲಿ ಗುಂಡೇಟಿಗೆ ಉಗ್ರರು ಬಲಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಶೇಶ್ ಪೌಲ್ ವೈದ್ ತಿಳಿಸಿದ್ದಾರೆ.

ಉರಿ ವಲಯದ ಸುತ್ತಮುತ್ತ ಹಲವು ಉಗ್ರರು ಅಡಗಿರುವ ಶಂಕೆಯಿದೆ. ಈಗಾಗಲೇ ಐದು ಮೃತದೇಹ ಪತ್ತೆಯಾಗಿದೆ. ಆರನೇ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ವೈದ್ ಹೇಳಿದ್ದಾರೆ.

ಸೇನಾ ಕಾರ್ಯಚರಣೆಯನ್ನು ಶ್ಲಾಘಿಸಿದ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಗಡಿಯೊಳಗೆ ನುಸುಳಲು ಯತ್ನಿಸಿದ ಉಗ್ರರ ವಿರುದ್ಧ ಹೋರಾಡಿದ ಭದ್ರತಾ ಪಡೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry