ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕರೂಪ ಶಿಕ್ಷಣದಿಂದ ಸರ್ಕಾರಿ ಶಾಲೆಗಳ ಉಳಿವು

ಶಾಲೆಯ ಸುವರ್ಣ ಮಹೋತ್ಸವದಲ್ಲಿ ಶಾಸಕ
Last Updated 15 ಜನವರಿ 2018, 9:18 IST
ಅಕ್ಷರ ಗಾತ್ರ

ಹೊಸಕೆರೆ(ಎನ್.ಆರ್.ಪುರ): ಏಕ ರೂಪದ ಶಿಕ್ಷಣದ ನೀತಿ ಜಾರಿಯಾದಾಗ ಮಾತ್ರ ಸರ್ಕಾರಿ ಶಾಲೆಗಳು ಪ್ರಬಲ ವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಎನ್.ಜೀವರಾಜ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಶನಿವಾರ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋ ತ್ಸವ ಹಾಗೂ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಣ ನೀಡುವ ಉದ್ದೇಶದಿಂದ 50 ವರ್ಷಗಳ ಹಿಂದೆ ಈ ಗ್ರಾಮದಲ್ಲಿ ಶಾಲೆ ತರಲು ಪ್ರಯತ್ನಿಸಿದ ಚೇತನಗಳಿಗೆ ನಾನು ಅಭಿನಂದಿಸುತ್ತೇನೆ. ಈ ಶಾಲೆಯಲ್ಲಿ 101 ವಿದ್ಯಾರ್ಥಿಗಳಿದ್ದು, ಮಲೆನಾಡಿನ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ದಾಖಲೆಯಾಗಿದೆ’ ಎಂದರು.

‘ಗ್ರಾಮಸ್ಥರ ಸಹಕಾರದಿಂದ ಶಾಲೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶಾಲೆಯ ನೂತನ ಕಟ್ಟಡವನ್ನು ಆಟದ ಮೈದಾನದ ವ್ಯಾಪ್ತಿಯಲ್ಲಿ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಪರಿಶೀಲಿಸಲಾಗುವುದು. ಸರ್ಕಾರಿ ಶಾಲೆಯ ದುರಸ್ತಿಗೆ ವಾರ್ಷಿಕ ₹40 ಲಕ್ಷ ಅನುದಾನ ನೀಡುವ ಭರವಸೆ ಸರ್ಕಾರ ನೀಡಿತ್ತು. ಈ ಪ್ರಮಾಣದ ಅನುದಾನ ಬಿಡುಗಡೆಯಾಗದಿರುವುದರಿಂದ ಶಾಲೆಗಳ ಕಟ್ಟಡ ದುರಸ್ತಿ ಪಡಿಸಲು ಸಾಧ್ಯವಾಗುತ್ತಿಲ್ಲ’ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಈ.ಸಿ.ಜಯಶ್ರೀ ಮೋಹನ್ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಎಲ್ಲ  ರೀತಿಯ ಭಾಗ್ಯಗಳನ್ನು ಕಲ್ಪಿಸಿಕೊಟ್ಟಿದೆ. ಶಾಲಾ ಕಟ್ಟಡದ ದುರಸ್ತಿ ಭಾಗ್ಯಕ್ಕೆ ಹಣ ನೀಡುತ್ತಿಲ್ಲ. ಅನುದಾನ ಕಡಿಮೆ ಇರುವುದರಿಂದ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.

ಹಳೇ ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಆರ್.ಸದಾಶಿವ ‘ಶಾಲೆಯ ಅಭಿವೃದ್ಧಿಗೆ ಅನುದಾನ ತರುವಲ್ಲಿ ಶಾಲಾ ಆಡಳಿತ ಮಂಡಳಿಯವರು ಶ್ರಮಿಸಬೇಕು. ಮಕ್ಕಳಿಗೆ ಶಿಕ್ಷಣ ನೀಡಬೇಕು’ ಎಂದರು.

ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಎಸ್.ಲಿಂಗಪ್ಪ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಡಿ.ರಾಜೇಗೌಡ, ಮಾಜಿ ಉಪಾಧ್ಯಕ್ಷ ಪಿ.ಜೆ.ಅಂಟೋಣಿ, ತಾಲ್ಲೂಕು ಪಂಚಾಯಿತಿ ಸದಸ್ಯ ಎಂ.ಎನ್.ನಾಗೇಶ್ ,ಬಾಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್.ವಸಂತಕುಮಾರ್, ಉಪಾಧ್ಯಕ್ಷೆ ಅಂಬಿಕಾ. ಸದಸ್ಯೆ ಸುಲೋಚನಾ,ಹೊನ್ನೆಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ, ಬಿಇಓ ಪಿ.ನಾಗರಾಜ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜೇಂದ್ರ, ಶಂಕರಮೂರ್ತಿ, ಮಥಾಯಿ, ಮೊಗಣ್ಣಗೌಡ, ಲೋಹಿತ್, ಕೃಷ್ಣನಾಯ್ಕ, ರಾಹುಲ್, ಲೋಹಿತ್, ಲಿಸ್ಸಿ, ಸಹನಾ, ಸ್ವಪ್ನ ಪಾಲ್ಗೊಂಡಿದ್ದರು. ಈ ಹಿಂದೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT