ದಕ್ಷಿಣ ಆಫ್ರಿಕಾದ ನೆಲದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ

7

ದಕ್ಷಿಣ ಆಫ್ರಿಕಾದ ನೆಲದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ

Published:
Updated:
ದಕ್ಷಿಣ ಆಫ್ರಿಕಾದ ನೆಲದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ

ಸೆಂಚೂರಿಯನ್: ದಕ್ಷಿಣ ಆಫ್ರಿಕಾದ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಶತಕ ಬಾರಿಸಿ ಮಿಂಚಿದ್ದಾರೆ.

ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶತಕ ಬಾರಿಸಿದ ಕೊಹ್ಲಿ ಅವರು ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೆಲದಲ್ಲಿ ಶತಕ ಹೊಡೆದ ಎರಡನೇ ನಾಯಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

1996–97ರ ಅವಧಿಯಲ್ಲಿ ಭಾರತದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ 169 ರನ್ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ಈ ಬಾರಿ ಕೊಹ್ಲಿ ಅವರು 146 ಎಸೆತಕ್ಕೆ 100 ರನ್ ಗಳಿಸಿದ ಕೊಹ್ಲಿ ಈ ಸಾಧನೆ ಮಾಡಿದ್ದು, ಈ ಮೂಲಕ 21 ಶತಕ ಸಿಡಿಸಿದಂತಾಗಿದೆ.

ದಕ್ಷಿಣ ಆಫ್ರಿಕಾದ 335 ರನ್‌ಗಳ ಸವಾಲಿಗೆ ಉತ್ತರ ನೀಡಿದ ಭಾರತ ತಂಡ ಮೂರನೇ ದಿನದಾಟದಲ್ಲಿ 6 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry