ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 29 ಕುಟುಂಬ ಸ್ಥಳಾಂತರ

7

ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 29 ಕುಟುಂಬ ಸ್ಥಳಾಂತರ

Published:
Updated:

ಠಾಣೆ: ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇರುವ ಬಹುಮಹಡಿ ಕಟ್ಟಡದ ಎಲೆಕ್ಟ್ರಿಕಲ್‌ ಮೀಟರ್‌ ಬಾಕ್ಸ್‌ನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಜ್ವಾಲೆ ಆವರಿಸಿಕೊಂಡ ಕಾರಣ ಏಳು ಅಂತಸ್ತಿನ ಕಟ್ಟಡದಲ್ಲಿ ವಾಸವಿದ್ದ 29 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ ಎಂದು ನಗರ ಪಾಲಿಕೆಯ ಸ್ಥಳೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಸಂತೋಷ್‌ ಕದಂ ಹೇಳಿದ್ದಾರೆ.

ಬೆಳಗಿನ ಜಾವ 3 ಗಂಟೆಗೆ ಬೆಂಕಿ ಅವಘಡ ಸಂಭವಿಸಿದ್ದು, ಕೆಲವೇ ನಿಮಿಷಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಇದರಿಂದಾಗಿ 32 ವರ್ಷದ ಮಹಿಳೆಯೊಬ್ಬರು ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ಮೀಟರ್‌ ಬಾಕ್ಸ್‌ನ ಬಳಿ ಇದ್ದ ಎರಡು ಕಾರುಗಳಿಗೆ ಹಾನಿಯಾಗಿದೆ ಎಂದೂ ಹೇಳಿದ್ದಾರೆ.

ಶಾರ್ಟ್‌ ಸರ್ಕಿಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry