ಬಾಲಕಿಗೆ ಲೈಂಗಿಕ ದೌರ್ಜನ್ಯ: ಬಂಧನ

7

ಬಾಲಕಿಗೆ ಲೈಂಗಿಕ ದೌರ್ಜನ್ಯ: ಬಂಧನ

Published:
Updated:

ಚಂಡಿಗಡ: ಮರದ ತುಂಡನ್ನು ಹತ್ತು ವರ್ಷದ ಬಾಲಕಿಯ ಗುಪ್ತಾಂಗಕ್ಕೆ ತುರುಕಿ ಕ್ರೂರ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ 50 ವರ್ಷದ ವ್ಯಕ್ತಿ

ಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇಲ್ಲಿನ ಪಿಂಜೊರೆ ಸಮೀಪ ಭಾನುವಾರ ಈ ಪ್ರಕರಣ ನಡೆದಿದೆ. ರಾಜ್ಯದಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ದಲಿತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ.

ಬಾಲಕಿಯ ಪಾಲಕರು ನೀಡಿರುವ ದೂರು ದಾಖಲಿಸಿ, ಆರೋಪಿಯನ್ನು ಬಂಧಿಸಿ, ಪೊಸ್ಕೊ ಕಾಯ್ದೆಯಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಿಂಜೊರೆ ಪೊಲೀಸ್‌ ಠಾಣೆಯ ಎಎಸ್‌ಐ ಬ್ರಿಜ್‌ ಪಾಲ್‌ ತಿಳಿಸಿದ್ದಾರೆ.

ಬಾಲಕಿಯ ದೂರದ ಸಂಬಂಧಿಯಾಗಿರುವ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿಲ್ಲ.

ಹೊರಗೆ ಆಟವಾಡುತ್ತಿದ್ದ ಮಗು ಅಳುತ್ತ  ಮನೆಗೆ ಬಂದಿರುವುದನ್ನು ನೋಡಿದ ತಾಯಿ ಆ ಕುರಿತು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ ಮಗಳಿಗೆ ಅವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಮೂಲದ ಬಾಲಕಿಯ ಕುಟುಂಬ ಮತ್ತು ಆರೋಪಿ ಕಳೆದ ಕೆಲ ವರ್ಷಗಳಿಂದ ಪಿಂಜೊರೆ ಸಮೀಪದಲ್ಲಿ ನೆಲೆಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry