ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ರಥೋತ್ಸವ

Last Updated 15 ಜನವರಿ 2018, 19:30 IST
ಅಕ್ಷರ ಗಾತ್ರ

ಉಡುಪಿ: ಇಲ್ಲಿನ ಕೃಷ್ಣಮಠದಲ್ಲಿ ಸಪ್ತೋತ್ಸವದ ಕೊನೆಯ ದಿನವಾದ ಸೋಮವಾರ ನಡೆದ ಚೂರ್ಣೋತ್ಸವ ಹಾಗೂ ರಥೋತ್ಸವಕ್ಕೆ
ಸಾವಿರಾರು ಮಂದಿ ಭಕ್ತರು ಸಾಕ್ಷಿಯಾದರು.

ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಚೂರ್ಣೋತ್ಸವ ನಡೆಸಿದರು. ರಥದಲ್ಲಿ ಶ್ರೀಕೃಷ್ಣನ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥಬೀದಿ ಭಕ್ತರಿಂದ ತುಂಬಿ ಹೋಗಿತ್ತು. ರಥೋತ್ಸವದ ನಂತರ ಅವಭೃತೋತ್ಸವ ಸಂಪನ್ನಗೊಂಡಿತು.

ಕೃಷ್ಣಾಪುರ ಮಠದ ವಿದ್ಯಾಸಾಗರ ಸ್ವಾಮೀಜಿ, ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ, ಪರ್ಯಾಯ ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ಸ್ವಾಮೀಜಿ, ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ, ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ವಿಬುಧೇಂದ್ರ ಸ್ವಾಮೀಜಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.

ಭಾರಿ ಸಂಖ್ಯೆಯ ಭಕ್ತರು: ಶ್ರೀಕೃಷ್ಣ ಮಠಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಬೆಳಿಗ್ಗೆಯಿಂದಲೇ ಜನರು ಮಠದತ್ತ ಧಾವಿಸುತ್ತಿದ್ದ ದೃಶ್ಯ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT