ದೀಪಕ್ ಕೊಲೆ: ಮತ್ತೆ ಇಬ್ಬರ ಬಂಧನ

7

ದೀಪಕ್ ಕೊಲೆ: ಮತ್ತೆ ಇಬ್ಬರ ಬಂಧನ

Published:
Updated:

ಮಂಗಳೂರು: ಕಾಟಿಪಳ್ಳದ ದೀಪಕ್‌ರಾವ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾಟಿಪಳ್ಳ 2 ನೇ ಬ್ಲಾಕ್‌ ನಿವಾಸಿಗಳಾದ ಅಬ್ದುಲ್‌ ಅಜೀಜ್‌ (42), ಅಬ್ದುಲ್‌ ಅಜೀಮ್‌ (34) ಬಂಧಿತ ಆರೋಪಿಗಳು. ಪಣಂಬೂರು ಠಾಣೆಯ ಇನ್‌ಸ್ಪೆಕ್ಟರ್‌ ರಫೀಕ್‌, ಸಿಸಿಬಿ ಇನ್‌ಸ್ಪೆಕ್ಟರ್‌ ಶಾಂತಾರಾಮ ಹಾಗೂ ಸಿಬ್ಬಂದಿ ಈ ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ವಿಫ್ಟ್‌ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಜ.3 ರಂದು ಮಧ್ಯಾಹ್ನ 1.30ರ ಸುಮಾರಿಗೆ ದೀಪಕ್‌ ರಾವ್‌ ಅವರನ್ನು ಕೊಲೆ ಮಾಡಿದ್ದರು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು, ಅದೇ ದಿನ ಮೊಹಮ್ಮದ್‌ ನೌಷಾದ್‌, ಮೊಹಮ್ಮದ್‌ ಇರ್ಷಾನ್‌, ಪಿಂಕಿ ನವಾಜ್‌, ರಿಜ್ವಾನ್‌ ಎಂಬುವರನ್ನು ಬಂಧಿಸಿದ್ದರು. ಈ ಪೈಕಿ ಪಿಂಕಿ ನವಾಜ್‌ ಹಾಗೂ ರಿಜ್ವಾನ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರೂ ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಈ ಕೃತ್ಯದಲ್ಲಿ ಇನ್ನೂ ಹಲವು ಆರೋಪಿಗಳು ಶಾಮೀಲಾಗಿರುವುದು ಪತ್ತೆಯಾಗಿತ್ತು. ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ 6ಕ್ಕೆ ಏರಿದೆ ಎಂದು ಡಿಸಿಪಿ ಹನುಮಂತರಾಯ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry