ಮತದಾರರ ಹೆಸರು ನೋಂದಣಿ ‘ಆರಂಭ’

7

ಮತದಾರರ ಹೆಸರು ನೋಂದಣಿ ‘ಆರಂಭ’

Published:
Updated:

ಬೆಂಗಳೂರು: ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ‘ಆರಂಭ’ ಎಂಬ ಅಭಿಯಾನ ಹಮ್ಮಿಕೊಳ್ಳಲು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ (ಬಿಎಎಫ್‌) ನಿರ್ಧರಿಸಿದೆ.

ಪರಿಷ್ಕೃತ ಮತದಾರರ ಪಟ್ಟಿ ಹೆಸರು ಸೇರ್ಪಡೆ ಮಾಡಲು ಇದೇ 22 ಕೊನೆಯ ದಿನ. ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಟ್ಟಿಗೆ ಹೆಸರು ಸೇರಿಸಲು ಅಪಾರ್ಟ್‌ಮೆಂಟ್‌ ಸಮುಚ್ಚಯಗಳ ಸಾವಿರಾರು ಮಂದಿ ಪ್ರಯತ್ನಿಸುತ್ತಿದ್ದಾರೆ.

‘ಮುಖ್ಯ ಚುನಾವಣಾ ಅಧಿಕಾರಿ ಅವರನ್ನು ಕಳೆದ ವಾರ ಭೇಟಿಯಾಗಿ ಮನವಿ ನೀಡಿದ್ದೆವು. ಅಪಾರ್ಟ್‌ಮೆಂಟ್‌ ಸಮಚ್ಚಯಗಳಲ್ಲಿ ಮತದಾರರ ನೋಂದಣಿ ಶಿಬಿರ ಹಮ್ಮಿಕೊಳ್ಳಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಈ ವಾರಾಂತ್ಯದಲ್ಲಿ ಶಿಬಿರ ಹಮ್ಮಿಕೊಳ್ಳುತ್ತೇವೆ’ ಎಂದು ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ನರಸಿಂಹನ್‌ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry