ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಕ್ ಅವಸ್ಥಿ ವಿರುದ್ಧ ಕಮಿಷನರ್‌ಗೆ ದೂರು

Last Updated 15 ಜನವರಿ 2018, 20:01 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿಎಚ್‌ಎಸ್ ಸರ್ವೇ ಸಂಸ್ಥೆಯ ಹೆಸರಿನಲ್ಲಿ ದೀಪಕ್ ಅವಸ್ಥಿ ಎಂಬುವರು ಕಾ‌ಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ಸಮೀಕ್ಷಾ ವರದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಿ ಕೆಪಿಸಿಸಿ ಮಾಧ್ಯಮ ವಿಭಾಗವು ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರಿಗೆ ದೂರು ಕೊಟ್ಟಿದೆ.

‘ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ವಿಭಾಗದ ಅಧ್ಯಕ್ಷ ಪ್ರೊ.ಕೆ.ಇ.ರಾಧಾಕೃಷ್ಣ ಹಾಗೂ ಸಂಚಾ
ಲಕ ಎ.ಎನ್.ನಟರಾಜಗೌಡ ಒತ್ತಾಯಿಸಿದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ನಗರ ದಕ್ಷಿಣ ವಿಭಾಗದ ಡಿಸಿಪಿ ಶರಣಪ್ಪ ಅವರಿಗೆ ಕಮಿಷನರ್ ಸೂಚಿಸಿದ್ದಾರೆ. ಅದರ
ನ್ವಯ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನಲ್ಲಿ ಏನಿದೆ: ‘ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಸೂಚನೆಯಂತೆ 2017ರ ಡಿಸೆಂಬರ್ ತಿಂಗಳಲ್ಲಿ ಸಮೀಕ್ಷೆ ನಡೆಸಿದ್ದೇವೆ. ಅದರ ಪ್ರಕಾರ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 76 ಸ್ಥಾನ ಸಿಗಲಿವೆ’ ಎಂದು ಸಂಸ್ಥೆ ವರದಿ ನೀಡಿದೆ. ‘ನಾನು ಯಾವುದೇ ಸಮೀಕ್ಷೆಗೆ ಸೂಚಿಸಿಲ್ಲ’ ಎಂದು ಪರಮೇಶ್ವರ ಸಹ ಸ್ಪಷ್ಟಪಡಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT