ದಾಸರಹಳ್ಳಿ: ಸಮ್ಮೇಳನಾಧ್ಯಕ್ಷ ಕಂನಾಡಿಗಾ ನಾರಾಯಣಗೆ ಆಹ್ವಾನ

7

ದಾಸರಹಳ್ಳಿ: ಸಮ್ಮೇಳನಾಧ್ಯಕ್ಷ ಕಂನಾಡಿಗಾ ನಾರಾಯಣಗೆ ಆಹ್ವಾನ

Published:
Updated:

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಘಟಕದ 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಥೆಗಾರ ಕಂನಾಡಿಗಾ ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.

ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎಸ್.ಮುನಿರಾಜು ಹಾಗೂ ಘಟಕದ ಅಧ್ಯಕ್ಷ ವೈ.ಬಿ.ಎಚ್.ಜಯದೇವ್ ಅವರು ಪೀಣ್ಯ ದಾಸರಹಳ್ಳಿ ಸಮೀಪದ ಚಿಕ್ಕಸಂದ್ರದಲ್ಲಿರುವ ನಾರಾಯಣ ಅವರ ಮನೆಗೆ ತೆರಳಿ ಆಹ್ವಾನ ನೀಡಿದರು.

ಮಲ್ಲಸಂದ್ರದ ಸರ್ಕಾರಿ ಶಾಲೆಯ ಆವರಣದಲ್ಲಿ ಫೆಬ್ರುವರಿ 11ರಂದು ಸಮ್ಮೇಳನ ನಡೆಯಲಿದೆ.

ಇತಿಹಾಸ ಗೋಷ್ಠಿ, ಮಹಿಳಾ ಗೋಷ್ಠಿ, ಕವಿಗೋಷ್ಠಿ, ಹಾಸ್ಯಗೋಷ್ಠಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ

ಲಾಗಿದೆ ಎಂದು ಜಯದೇವ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry