ಬಂದೋಬಸ್ತ್, ಸಿ.ಸಿ.ಟಿ.ವಿ. ಕ್ಯಾಮೆರಾ ಕಣ್ಗಾವಲು

7

ಬಂದೋಬಸ್ತ್, ಸಿ.ಸಿ.ಟಿ.ವಿ. ಕ್ಯಾಮೆರಾ ಕಣ್ಗಾವಲು

Published:
Updated:

ಹುಣಸೂರು: ಹನಗೋಡು ಹೋಬಳಿ ದೊಡ್ಡಹೆಜ್ಜೂರು ಗ್ರಾಮದಲ್ಲಿ ಜ. 16ರಂದು ವೀರಾಂಜನೇಯಸ್ವಾಮಿ ರಥೋತ್ಸವ ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್‌, ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ಇರಲಿದೆ ಎಂದು ಪಿಎಸ್‌ಐ ಪುಟ್ಟಸ್ವಾಮಿ ಹೇಳಿದರು.

ಗ್ರಾಮದ ದೇವಸ್ಥಾನದ ಆವರಣದಲ್ಲಿ ಸಿಪಿಐ ಪೂವಯ್ಯ ಅವರ ನೇತೃತ್ವದಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಇಲಾಖೆ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ರಥೋತ್ಸವಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ದೇವಸ್ಥಾನದಲ್ಲಿ ರಥೋತ್ಸವದಂದು ಕರ್ತವ್ಯ ನಿರ್ವಹಿಸುವ ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಿಸಲಾಗಿದ್ದು, ಗುರುತಿನ ಚೀಟಿ ಹೊಂದಿರುವವರು ಮಾತ್ರ ದೇವಸ್ಥಾನದ ಆವರಣದಲ್ಲಿ ಪ್ರವೇಶಿಸಿ ಕೆಲಸದಲ್ಲಿ ತೊಡಗಿಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದರು.

ರಥೋತ್ಸವದಲ್ಲಿ ಭಾಗವಹಿಸಲು ಬರುವ ಭಕ್ತರ ವಾಹನ ನಿಲುಗಡೆಗೆ ದೇವಸ್ಥಾನದ ನಾಲ್ಕು ದಿಕ್ಕಿನಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ. ನಿಗದಿತ ಸ್ಥಳದಲ್ಲಿ ನಿಲ್ಲಿಸಿ ಜಾತ್ರೆಯಲ್ಲಿ ಭಾಗವಹಿಸಬೇಕಾಗಿ ಮನವಿ ಮಾಡಿದರು.

ಸಭೆಯಲ್ಲಿ ಸಿಪಿಐ ಪೂವಯ್ಯ ಕಾನೂನು ಸುವ್ಯವಸ್ಥೆ ಕುರಿತಂತೆ ನಾಗರಿಕರಿಗೆ ತಿಳಿವಳಿಕೆ ನೀಡಿದರು. ಸಭೆಯಲ್ಲಿ ದೇವಸ್ಥಾನದ ಜಾತ್ರಾ ಸಮಿತಿ ಕಾರ್ಯದರ್ಶಿ ಧರಣೀಶ್‌, ಗ್ರಾ.ಪಂ ಸದಸ್ಯ ನಾಗೇಶ್‌ ಮಾತನಾಡಿದರು. ಸಭೆಯಲ್ಲಿ ಶಂಕರೇಗೌಡ, ದಾ.ರಾ.ಮಹೇಶ್‌, ಮಣಿ, ಮಹದೇವ್‌, ಪುಟ್ಟೇಗೌಡ, ವಿಶ್ವನಾಥೇಗೌಡ, ರಾಮೇಗೌಡ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry