19 ವರ್ಷದೊಳಗಿನವರ ಏಕದಿನ ವಿಶ್ವಕಪ್‌: ಪಪುವಾ ನ್ಯೂಗಿನಿ ವಿರುದ್ಧ ಭಾರತಕ್ಕೆ ಭರ್ಜರಿ ಜಯ

7

19 ವರ್ಷದೊಳಗಿನವರ ಏಕದಿನ ವಿಶ್ವಕಪ್‌: ಪಪುವಾ ನ್ಯೂಗಿನಿ ವಿರುದ್ಧ ಭಾರತಕ್ಕೆ ಭರ್ಜರಿ ಜಯ

Published:
Updated:
19 ವರ್ಷದೊಳಗಿನವರ ಏಕದಿನ ವಿಶ್ವಕಪ್‌: ಪಪುವಾ ನ್ಯೂಗಿನಿ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಮೌಂಟ್‌ ಮೌಂಗಾನುಯಿ, ನ್ಯೂಜಿಲೆಂಡ್‌: 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ, ಪಪುವಾ ನ್ಯೂಗಿನಿ ವಿರುದ್ಧ  ಭರ್ಜರಿ ಜಯ ದಾಖಲಿಸಿದೆ.

ಮೊದಲ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಮಣಿಸಿ ವಿಶ್ವಾಸದಿಂದ ಪುಟಿಯುತ್ತಿರುವ ಭಾರತ ಎರಡನೇ ಪಂದ್ಯದಲ್ಲಿ ಹತ್ತು ವಿಕೆಟ್‌ಗಳ ಜಯ ದಾಖಲಿಸಿತು.

ಮಂಗಳವಾರ ನಡೆದ ‘ಬಿ’ ಗುಂಪಿನ ಪಂದ್ಯದಲ್ಲಿ ಪೃಥ್ವಿ ಶಾ ಬಳಗ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಪುವಾ ನ್ಯೂಗಿನಿ 21.5 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 64 ರನ್‌ ಗಳಿಸಿತು. ಸುಲಭ ಗುರಿಯನ್ನು ಬೆನ್ನಟ್ಟಿದ ಭಾರತ 8 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೇ ಗೆಲುವು ದಾಖಲಿಸಿತು. ವೇಗದ ಆಟವಾಡಿದ ಪೃಥ್ವಿ ಶಾ 57 ರನ್ ಗಳಿಸಿದರು.

ಭಾರತದ ಪರ ಅನುಕುಲ್‌ ರಾಯ್‌ 5 ವಿಕೆಟ್‌ ಪಡೆಯುವ ಮೂಲಕ ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದರು.

ಸಂಕ್ಷಿಪ್ತ ಸ್ಕೋರ್‌

ನ್ಯೂಗಿನಿ: 64-10 (21.5)

ಭಾರತ:  67-0 (8)

ಫಲಿತಾಂಶ: ಭಾರತಕ್ಕೆ ಹತ್ತು ವಿಕೆಟ್‌ ಜಯ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry